ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು : ಜಲಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳ ತ್ವರಿತವಾಗಿ ಅನುಷ್ಟಾನಗೊಳಿಸಲು ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಿ,ಕಾಮಗಾರಿಗಳನ್ನು ಅನುಷ್ಠಾನಗೊಳಿ ಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ.ಎಂ.ಕಾರಜೋಳ ಅವರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದಲ್ಲಿಂದು ನಡೆದ  ಜಲಸಂಪನ್ಮೂಲ ಇಲಾಖೆಯ ವ್ಯಾಪ್ತಿಯ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಕೃಷ್ಣಾ ಭಾಗ್ಯ ಜಲ ನಿಗಮ,ಕರ್ನಾಟಕ ನೀರಾವರಿ ನಿಗಮ,ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ರ‍್ಯಯ ಜಲ ನಿಗಮ ಗಳಡಿ ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-೩,ಭದ್ರಾ ಮೇಲ್ದಂಡೆ ಯೋಜನೆ,ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ,ಮಹ ದಾಯಿ ಕಣಿವೆಯ ಕಳಸಾ ಮತ್ತು ಬಂಡೂರು ನಾಲಾ ತಿರುವು ಯೋಜನೆಗಳ,ನವಲಿ ಸಮತೋ ಲನಾ ಜಲಾಶಯ ನಿರ್ಮಾಣ ಯೋಜನಾ ಕಾಮಗಾರಿಗಳ ಪ್ರಸ್ತುತ ಹಂತದ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಚರ್ಚಿಸಿದರು. ಮೇಕೆದಾಟು ಯೋಜನೆಯ ಪ್ರಸ್ತುತ ಹಂತದ ವಿವರಗಳನ್ನು ಹಾಗೂ ಕಾನೂನಾತ್ಮಕ ಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖವಾಗಿ ಭೂಸ್ವಾಧೀನ ಪ್ರಕ್ರಿಯೆ ಗಳಿಗೆ ಆದ್ಯತೆ ನೀಡಿ. ಆದ್ಯತೆ ಮೇಲೆ ಭೂಪರಿಹಾರ ನೀಡುವ ನಿಟ್ಟಿನಲ್ಲಿ ನಿಗಮಗಳಡಿ ಸೂಕ್ತ ಕಾರ್ಪಸ್ ಫಂಡ್  ಸ್ಥಾಪಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು.ಭೂಸ್ವಾಧೀನತೆ ಪ್ರಕ್ರಿಯೆಯನ್ನು ತೀವ್ರ ಗತಿಯಲ್ಲಿ ಜರುಗಿಸಲು ಪ್ರಮುಖವಾಗಿ ವಿಶೇಷ ಭೂಸ್ವಾಧೀನಾಧಿ ಕಾರಿಗಳು ಮತ್ತು ಇತರೆ ಸಂಬಂಧಿತ ಅನೇಕ ಅಧಿಕಾರಿ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಾಗಿ ಸರ್ಕಾರದ ಅನುಮೋನ ದೆಗಾಗಿ ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಏತ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಹಲವು ಯೋಜನೆಗಳಲ್ಲಿ ಜಾಕ್‌ವೆಲ್ ಕಂ ಪಂಪ್ ಹೌಸ್‌ಗಳ ನಿರ್ಮಾಣಗಳನ್ನು ಪೂರ್ಣಗೊಳಿಸದೇ ಪೈಪ್‌ಲೈನ್ ಅಳವಡಿಕೆಯ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಬಿಲ್ ಪಾವತಿ ಮಾಡುತ್ತಿರುವ ಕುರಿತು ಚರ್ಚಿಸಲ್ಪಟ್ಟು ಇನ್ನು ಮುಂದೆ ಜಾಕ್‌ವೆಲ್ ಕಂ ಪಂಪ್ ಹೌಸ್‌ನ ಶೇ.೫೦ರಷ್ಟು ಪ್ರಗತಿ ಸಾಧಿಸದ ನಂತರ ವಷ್ಟೇ ಪೈಪ್‌ಲೈನ್ ಕಾಮಗಾರಿಗಳನ್ನು  ಪ್ರಾರಂಭಿಸಬೇಕು.ಈಗಾಗಲೇ ಮುಕ್ತಾಯ ಹಂತದಲ್ಲಿರುವ ಯೋಜನಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಲು  ಸಚಿವರು ಸೂಚಿಸಿದರು.

ಇನ್ನು ಮುಂದೆ ಸೂಕ್ಷ್ಮ ನೀರಾವರಿ ಯೋಜನೆಗಳ ಬದಲಾಗಿ ಫಲಾ ನುಭವಿ ರೈತರ / ಸಮೂಹ ರೈತರ ಜಮೀನುಗಳಡಿ ನೀರಿನ ಸಂಗ್ರಹಣ ತೊಟ್ಟಿಗಳನ್ನು ನಿರ್ಮಿಸಿ ನೀರು ಒದಗಿಸುವುದು ಮತ್ತು ಸದರಿ ಸಂಗ್ರ ಹಣೆಯಿಂದ ರೈತರು ತಮ್ಮ ಸ್ವಂತ ಪೈಪ್‌ಲೈನ್ ಅಳವಡಿಕೆಗಳಿಂದ ನೀರಾವರಿಗೆ ನೀರನ್ನು ಬಳಸಲು ಅವಕಾಶಗಳನ್ನು ಕಲ್ಪಿಸುವ ಕುರಿತು ಅಥವಾ ಫಲಾನುಭವಿ ರೈತರ ಸರ್ವೆ ನಂಬರ್‌ಗಳಿಗೆ ಸೂಕ್ತ ಓಟ್‌ಲೆಟ್ ಗಳನ್ನು  ನಿರ್ಮಿಸುವುದು ಮತ್ತು ಅಲ್ಲಿಂದ ರೈತರು ತಮ್ಮ ಹೊಲಗಳಿಗೆ ನೀರನ್ನು ಪಡೆಯುವ ವ್ಯವಸ್ಥೆ ಕುರಿತಾಗಿ ಸೂಕ್ತವಾಗಿ ಮಾರ್ಪಾಡುಗೊಳಿ ಸುವ ಬಗ್ಗೆ ಪರಿಶೀಲಿಸಲು  ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನಿಗಮಗಳಡಿ ಅನುಷ್ಟಾನಗೊಳಿಸುತ್ತಿರುವ ಅನೇಕ ಕೆರೆ ತುಂಬಿಸುವ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಸಫಲತೆ ಕುರಿತಾಗಿ ಯೋಜನೆಗಳ ಮೌಲ್ಯಮಾಪನ  ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಆದೇಶಿಸಿದರು.ಈಗಾಗಲೇ ನೀರಾವರಿ ಸೌಲಭ್ಯ ಕಲ್ಪಿಸಿರುವ ಯೋಜನೆಗಳಡಿ ನೀರಾವರಿ ವಂಚಿತಗೊಂಡ  ಭೂ ಪ್ರದೇಶಗಳನ್ನು ನಿಖರವಾಗಿ ಗುರುತಿಸಲು,ಈ ನಿಟ್ಟಿನಲ್ಲಿ ಸಕರಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು.

ನಿಗಮಗಳಡಿ ನೀರಾವರಿ ಯೋಜನೆಗಳ ಅನುಷ್ಟಾನದ ಜೊತೆಗೆ ಪಾಲನೆ ಮತ್ತು ಪೋಷಣೆ ಜವಾಬ್ದಾರಿ ಹೊಂದಿದ್ದು,ನಿಗಮಗಳ ವ್ಯಾಪ್ತಿಯ ಅನೇಕ ವಿಭಾಗ ಮತ್ತು ಉಪ ವಿಭಾಗಗಳಡಿ ತಾಂತ್ರಿಕ ಸಿಬ್ಬಂದಿಯ ಕೊರತೆ (ಸಹಾಯಕ ಇಂಜಿನಿಯರ್ /ಕಿರಿಯ ಇಂಜಿನಿಯರ್) ಇರುವುದರ ಬಗ್ಗೆ ಚರ್ಚಿಸಲ್ಪಟ್ಟು ಪ್ರಸ್ತುತ ನಿಗಮಗಳ ಹಂತದಲ್ಲಿ ಯೋಜನಾವಾರು ಅಧೀಕ್ಷಕ ಅಭಿಯಂ ತರರುಗಳ ವ್ಯಾಪ್ತಿಯಲ್ಲಿನ ವಿಭಾಗ / ಉಪವಿಭಾಗಗಳಡಿ ಖಾಲಿ ಇರುವ ಮಂಜೂರಾದ ಹುದ್ದೆಗೆ   ಎದುರಾಗಿ ಅಲ್ಲಿಯ ಯೋಜನೆಗಳಿಗೆ ತರಬೇತಿ ಎಂಜಿಜಯರ್ ಗಳ ನೇಮಕಾತಿ ಬಗ್ಗೆ ಪರಿಶೀಲಿಸಿ ನಿಗಮಗಳ ಮಂಡಳಿ ಸಭೆಯಲ್ಲಿ ಪ್ರಸ್ತಾವನೆಗಳನ್ನು ಮಂಡಿಸಲು ಸೂಚಿಸಿದರು.ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅಂಗನವಾಡಿ ಕಟ್ಟಡ ಹಾಗೂ  ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವಿದ್ಯಾರ್ಥಿಗಳ ವಸತಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ  ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ,ಕಾರ್ಯ ದರ್ಶಿ ಎನ್.ಲಕ್ಷ್ಮಣರಾವ್ ಪೇಶ್ವೆ ಅವರು ಯೋಜನಾ ಕಾಮಗಾರಿಗಳ ಕುರಿತು ವಿಸ್ತೃತವಾಗಿ ವಿವರಿಸಿದರು.ಸಭೆಯಲ್ಲಿ ಕೆಎನ್‌ಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ,ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜೈಪ್ರಕಾಶ್, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

More News

You cannot copy content of this page