ಬೆಂಗಳೂರು :ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಸುನಂದಾ ಫಾಲನೇತ್ರ ಅವರು ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಸ ವ್ಯಕ್ತಪಡಿ ಸಿದ್ದಾರೆ.
ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಹಳ ವರ್ಷದ ನಂತರ ಮೈಸೂರಿನಲ್ಲಿ ಬಿಜೆಪಿಯವರು ಮೇಯರ್ ಆಗಿದ್ದಾರೆ. ಇದಕ್ಕೆ ಎಲ್ಲ ಪಾಲಿಕೆ ಸದಸ್ಯರಿಗೆ ಹಾಗೂ ಮೈಸೂರಿನ ಜನತೆಗೆ ಧನ್ಯ ವಾದಗಳು.ಇದಕ್ಕಾಗಿ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಆರ್.ಅಶೋಕ್,ಶಾಸಕರಾದ ನಾಗೇಂದ್ರ, ರಾಮದಾಸ್ ಪಕ್ಷದ ಕಾರ್ಯಕರ್ತರು, ಅಧ್ಯಕ್ಷರೂ ಎಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.
ದೆಹಲಿ ಪ್ರವಾಸ : ದೆಹಲಿಗೆ ಇಂದು ತೆರಳಿದ ಮುಖ್ಯಮಂತ್ರಿಗಳು ಸಂಜೆ ಕೇಂದ್ರ ಕೃಷಿ ಸಚಿವರು ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಲಿ ದ್ದಾರೆ.ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದೇನೆ. ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಇದೇ ವೇಳೆ ತಿಳಿಸಿದರು.