ಸೆ.15ರ ಒಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳ ಪೂರೈಕೆಗೆ ಕ್ರಮ : ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆ ಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ನಿಗದಿತ ಅವಧಿಯೊಳಗೆ ಪಠ್ಯ ಪುಸಕ್ತಗಳು ತಲುಪುವ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ವಿಧಾನಸೌಧದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಕೋವಿಡ್-19 ಕಾರಣದಿಂದ ಸರಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ ವಿಳಂಬವಾಗಿದೆ.ಆದರೂ,ಶಾಲೆ ಆರಂಭಕ್ಕೆ ಮೊದಲೇ ಶೇ.50ರಷ್ಟು ಪಠ್ಯ ಪುಸ್ತಕಗಳು ಶಾಲೆಗಳನ್ನು ತಲುಪಬೇಕು ಎಂಬ ಗುರಿ ಹೊಂದ ಲಾಗಿತ್ತು.ಅದರಂತೆ ರಾಜ್ಯದ ಶೇ.50ಕ್ಕಿಂತ ಹೆಚ್ಚು ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸಲಾಗಿದೆ ಎಂದು ತಿಳಿಸಿದರು.

ಇಂದಿನವರೆಗೆ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿ ವೆ.ಮುಂದಿನ ಒಂದು ವಾರದೊಳಗೆ ಮುದ್ರಣಗೊಂಡಿರುವ ಎಲ್ಲ ಪುಸ್ತಕ ಗಳು ಶಾಲೆಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ.ಆಯಾ ತರಗತಿಗಳಿಗೆ ಸಂಬಂಧಿಸಿದ ಎಲ್ಲ ವಿಷಯ,ಭಾಷೆ ಪುಸ್ತಕಗಳು ಮುದ್ರಣ ಗೊಂಡ ಕೂಡಲೇ ಶಾಲೆಗಳಿಗೆ ಪೂರೈಕೆ ಮಾಡಲಾಗುತ್ತದೆ.ಸೆಪ್ಟಂಬರ್ 15ರ ಒಳಗಾಗಿ ಎಲ್ಲ ಶಾಲೆಗಳಿಗೆ ಪುಸ್ತಕಗಳು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

More News

You cannot copy content of this page