ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಸಿಎಂ ಭೇಟಿ

ನವದೆಹಲಿ – ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿ ಅವರು ದಾಖಲಿಸಿದರು.

“ಸ್ಮಾರಕಕ್ಕೆ ಭೇಟಿ ನೀಡಿರುವುದು ಅವಿಸ್ಮರಣೀಯ ಘಳಿಗೆ, ಈ ಮ್ಯೂಸಿಯಂ ಪೊಲೀಸರ ಕರ್ತವ್ಯ ಪರತೆ ಹಾಗೂ ಸಮರ್ಪಣಾ ಭಾವದ ಕುರಿತು ಒಳನೋಟ ನೀಡುತ್ತದೆ, ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಕಾರಣ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ, ಈ ಭೇಟಿಯು ನನ್ನಲ್ಲಿ ಸಮರ್ಪಣಾ ಭಾವ ಮತ್ತು ಕರ್ತವ್ಯ ಪ್ರಜ್ಞೆಯನ್ನು ಜಾಗೃತಗೊಳಿಸಿದೆ, ದೇಶದ ಎಲ್ಲಾ ಪೊಲೀಸರಿಗೆ ನನ್ನ ನಮನಗಳು.’

ಇದು ಸಿಎಂ ಬಸವರಾಜ ಬೊಮ್ಮಾಯಿ‌  ಅವರು ಸಂದರ್ಶಕರ ಪುಸ್ತಕದಲ್ಲಿ ದಾಖಲಿಸಿದ ಅಭಿಪ್ರಾಯ.

More News

You cannot copy content of this page