ಅತ್ಯಾಚಾರ ಪ್ರಕರಣ-ಆರೋಪಿಗಳ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ : ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ  ಅತ್ಯಾಚಾರ ಪ್ರಕರಣದ  ಆರೋಪಿಗಳು ಯಾರೇ ಆಗಿರಲಿ,ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ  ಸ್ಪಷ್ಟ ಆದೇಶ ನೀಡಿದ್ದೇನೆ.ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ‌ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಕರಣಕ್ಕೆ ಸಂಬಂ ಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು,ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಜತೆ ಮಾತನಾಡಿದ್ಧೇನೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ  ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.ತನಿಖೆ ಚುರುಕಾಗಿ ನಡೆಯುತ್ತಿದೆ. ಮೊಬೈಲ್ ಟ್ರಾಕಿಂಗ್ ಟವರ್ ಲೊಕೇಷನ್ ಗಳ ಬಗ್ಗೆ ತನಿಣೆ ನಡೆಸಲಾಗುತ್ತಿದೆ.ಆದಷ್ಟು ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು.ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವು ದಿಲ್ಲ.ಗೃಹ ಸಚಿವರ ವಿವಾದಾತ್ಮಕ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದ್ದೇನೆ.ಅವರೇ ಹೇಳಿಕೆ ನೀಡುತ್ತಾರೆಂದು ಅವರು ಹೇಳಿದರು.

More News

You cannot copy content of this page