ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಷಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್, ಸಂಸದರಾದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.