ಬೆಂಗಳೂರು – ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರು ಇಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಬೆಳಗ್ಗೆ ವಿದ್ಯುಕ್ತವಾಗಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ಟಿ. ರೇಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.