ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ : ಸಿಎಂ ಬಸವರಾಜ್ ಬೊಮ್ಮಾಯಿ

ಹಿರೇಕೆರೂರ : ಕೃಷ್ಣಾ ಮೇಲ್ದಂಡೆ ಯೋಜನೆಯಡಿ‌ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ.ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು,ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ‌ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು,ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ.ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣ ದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ.

ತಜ್ಞರು ಕೆಲವು ಸಲಹೆ,ಸೂಚನೆ ನೀಡಿದ್ದಾರೆ.ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿ ಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

More News

You cannot copy content of this page