ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತವರು ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ 6223.50 ಲಕ್ಷದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,1106 ಲಕ್ಷದ 2 ಅಭಿವೃದ್ಧಿ ಕಾಮಗಾರಿಗಳಿಗೆ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಅಮೃತ ಯೋಜನೆಯಡಿ 1412 ವೆಚ್ಚದಲ್ಲಿ 24*7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ ವಿವಿಧ ಕಾಮಗಾರಿಗಳನ್ನು ಇದೇ ವೇಳೆ ಲೋಕಾರ್ಪಣೆ ಮಾಡಿದರು.ತಾಲ್ಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ರೂ.170 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ .93ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ,ರೂ.62.80ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ,ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಗಳಡಿ ರೂ.200ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ,ರೂ.49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ,ರೂ.50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿದರು.
ನಗರಸಭೆ ರೂ.500 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಾಜಕ ರಸ್ತೆ,ಚರಂಡಿ ನಿರ್ಮಾಣ,ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೂ ಇದೇ ವೇಳೆ ಚಾಲನೆ ನೀಡಿದರು.ರೂ.636 ಲಕ್ಷಗಳ ವೆಚ್ಚದಲ್ಲಿ ಸಮುದಾಯ ಭವನ,ದೊಡ್ಡಕೆರೆ ಹಾಗೂ ಕಮದೋಡ ,ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ರೂ.3250 ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶಂಕುಸ್ಥಾಪನೆ ನೆರವೇರಿಸಿದರು.
ರೂ.906ಲಕ್ಷ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ,ಚಳಗೇರಿ,ಅರೆ ಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಉದ್ಘಾಟಿಸಿದರು.ಮುಖ್ಯ ಮಂತ್ರಿಯಾಗಿ ತಿಂಗಳು ವೇಳೆಗೆ ಜಿಲ್ಲೆಯ ನೂರಾರು ಕೋಟಿ ರೂ ಯೋಜನೆಗೆ ಚಾಲನೆ ನೀಡಿರುವು ದು.ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಮಾದರಿ ಜಿಲ್ಲೆಯಾಗಿ ಮಾಡುವುದು ಹಾಗೂ ಅಭಿ ವೃದ್ದಿಯ ಪರ್ವ ನಡೆಯಲಿದೆ ಎಂದು ತಿಳಿಸುವ ಮೂಲಕ ಬಾಕಿ ಉಳಿದಿರುವ ಕಾಮಗಾರಿಗಳಿಗೂ ಸಾಕಷ್ಟು ಅನುದಾನ,ಯೋಜನೆಗಳಿಗೆ ಅನುಮೋದನೆ ದೊರೆಯಲಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.