ಚಿಕ್ಕಬಳ್ಳಾಪುರ :ರಾಜ್ಯದಲ್ಲಿ ನೀಡಲಾಗುತ್ತಿರುವ ಲಸಿಕೆ ಸಂಖ್ಯೆ 4 ಕೋಟಿ ಗೆ ತಲುಪಿದ್ದು,ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ದಿನಕ್ಕೆ 5 ಲಕ್ಷದಂತೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ನೀಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಪ್ರತಿ ದಿನ 5 ಲಕ್ಷಕ್ಕೂ ಹೆಚ್ಚು ಲಸಿಕೆ ನೀಡಲು ಕೋರಲಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 30 ಸಾವಿರ ಲಸಿಕೆ ನೀಡ ಲಾಗಿದೆ.ಇನ್ನು ಮುಂದೆ 50 ಸಾವಿರ ಗುರಿ ನೀಡಲಾಗಿದೆ.ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಾಗುವುದು.ಇದಕ್ಕೆ ಮುಖ್ಯ ಮಂತ್ರಿಗಳು ಚಾಲನೆ ನೀಡಲಿದ್ದಾರೆ.ಆ ದಿನ 15 ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗುವುದು.ಕೊಳೆಗೇರಿ ಗಳಲ್ಲಿ ಇರುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು.ಬೆಂಗಳೂರು ಒಂದರಲ್ಲೇ ಒಂದು ಕೋಟಿ ಲಸಿಕೆ ನೀಡಲಾಗಿದೆ.ಕೆಲವೇ ದಿನಗಳಲ್ಲಿ ಬೆಂಗಳೂರಿ ನಲ್ಲಿ ಎರಡೂ ಡೋಸ್ ಲಸಿಕೆಯನ್ನು ಪೂರ್ಣಗೊಳಿ ಸಿ ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ಮೊದಲ ಮಹಾನಗರವಾಗಿಸ ಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರು ಕೋವಿಡ್ ವೇಗವಾಗಿ ಹರಡುವ ಸ್ಥಳ.ಬೇರೆ ದೇಶಗಳಿಂ ದಲೂ ಜನರು ಇಲ್ಲಿಗೆ ಬರುತ್ತಾರೆ.ಇಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡ ಲಾಗುತ್ತಿದೆ.ಕೋವಿಡ್ 3 ನೇ ಅಲೆಗೆ ಸಿದ್ಧತೆಯಾಗಿ ರಾಜ್ಯದ ಎಲ್ಲ ಜಿಲ್ಲೆಗ ಳಲ್ಲಿ ಮಕ್ಕಳ ನಿಗಾ ಘಟಕವನ್ನು 60-70 ಹಾಸಿಗೆ ಸಹಿತ ಅಭಿವೃದ್ಧಿಪಡಿಸ ಲಾಗಿದೆ ವಿವರಿಸಿದರು.
ನಂತರ ಶಿಡ್ಲಘಟ್ಟದ ಬಾಲಾಜಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಶಿಡ್ಲಘಟ್ಟದಲ್ಲಿ 9-10 ಕೆರೆಗಳಿಗೆ ಎಚ್ ಎನ್ ವ್ಯಾಲಿಯಿಂದ ನೀರು ತುಂಬಿಸುವ ಯೋಜನೆ ಬಂದಿದೆ.ಈ ಬಗ್ಗೆ ಟೀಕೆ ಗಳು ಬಂದಿದ್ದು,ಇಂದು ಕೆರೆಯ ನೀರು ದಿಟ್ಟ ಉತ್ತರ ಬಂದಿದೆ.ಪ್ರತಿ ಕೆರೆಗೆ ಈ ಭಾಗದಲ್ಲಿ ನೀರು ತುಂಬಿಸುವ ಯೋಜನೆ ಮಾಡಬೇಕಿದೆ.ಜೊತೆಗೆ ಶಿಡ್ಲಘಟ್ಟದಲ್ಲಿ ಕೈಗಾರಿಕಾ ವಲಯಗಳನ್ನು ನಿರ್ಮಿಸ ಲಾಗುವುದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಸಹಕಾರಿ ಸಂಘ ಮಾಡಬೇಕೆಂದು ಕೇಂದ್ರಕ್ಕೆ ಕೋರಲಾಗಿತ್ತು.ಒಂದು ತಿಂಗಳೊಳಗೆ ಪ್ರತ್ಯೇಕ ದೊರೆಯ ಲಿದೆ.ಹೈನುಗಾರಿಕೆ,ಮಗ್ಗ,ರೇಷ್ಮೆ ಸೇರಿದಂತೆ ಸಣ್ಣ ಸಂಘಗಳಿಗೆ ಆರ್ಥಿಕ ನೆರವು ನೀಡಲಾಗುವುದು.ಅಭಿವೃದ್ಧಿ ವಿಚಾರ ಬಂದಾಗ ರಾಜಕೀಯ ಮಾಡುವುದಿಲ್ಲ ಎಂದರು.
ಎತ್ತಿನಹೊಳೆ ಯೋಜನೆಗೆ ಸ್ಪಷ್ಟತೆ :ಎತ್ತಿನಹೊಳೆ ಯೋಜನೆಯಲ್ಲಿ ಭೂಸ್ವಾಧೀನ ತಡ ಆಗುತ್ತಿದೆ.ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಅವರಿಗೂ ನೀರಾವರಿ ಬಗ್ಗೆ ಆಳ ಜ್ಞಾನವಿದೆ.ಬೆಂಗಳೂರು ಗ್ರಾಮಾಂ ತರ,ಚಿಕ್ಕಬಳ್ಳಾಪುರ,ರಾಮನಗರ, ಕೋಲಾರ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ನೀರು ದೊರೆಯಲಿದೆ.ಕೃಷ್ಣಾ ಮೇಲ್ದಂಡೆಯಿಂದ 156 ಟಿಎಂಸಿ ನೀರು ಪಡೆಯಬೇಕಿದೆ.ಇದಕ್ಕೆ ತಕರಾರು ನಡೆಯುತ್ತಿದ್ದು,ವಕೀಲರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಿದ್ದಾರೆ.ಶೀಘ್ರ ತಡೆಯಾಜ್ಞೆ ತೆರವುಗೊಳಿಸಿ ನೀರು ಕೊಡಿಸುವ ಕೆಲಸವಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ತಿಳಿಸಿದರು.
ಕಠಿಣ ಕ್ರಮ : ರಾಜ್ಯ ಅನೇಕ ಕಾರಣಗಳಿಗೆ ಹೆಸರುವಾಸಿಯಾಗಿದೆ.ಆದರೆ ಮೈಸೂರಿನ ಅತ್ಯಾಚಾರ ಘಟನೆ ದುರದೃಷ್ಟಕರ.ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳಿದ್ದು,ಅತ್ಯಾಚಾರ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.ಇಂತಹ ಘಟನೆ ಮರುಕಳಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಗಟ್ಟಿಯಾದ ನಿರ್ಧಾರ ಕೈಗೊಳ್ಳಲಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕಾಮಗಾರಿಗೆ ಚಾಲನೆ, ಉದ್ಘಾಟನೆ : ಶಿಡ್ಲಘಟ್ಟ ತಾಲೂಕಿನ ಸಾದಲಿ ನಾಡ ಕಚೇರಿಯನ್ನು ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.ನಂತರ ಬಶೆಟ್ಟಿಹಳ್ಳಿ ಬಳಿ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿದರು.ವಸತಿ ಶಾಲೆ ಕಾಮಗಾರಿಗೆ ಚಾಲನೆ,ನಗರೋತ್ಥಾನದಡಿ 4.60 ಕೋಟಿ ರೂ. ವೆಚ್ಚ ದಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ, 2 ಕೋಟಿ ರೂ.ವೆಚ್ಚದ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ ಮಾಡಿದರು.ಇದೇ ವೇಳೆ ಗುಡಿ ಹಳ್ಳಿಯ ಅಬ್ಲೂಡು ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ, ಸಚಿವರು ಕೆರೆಗೆ ಬಾಗಿನ ಸಮರ್ಪಿಸಿದರು.