ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಗರದಲ್ಲಿರುವ ನಿವಾಸದಲ್ಲಿಂದು ಭೇಟಿ ಮಾಡಿ ಚೆರ್ಚೆ ನಡೆಸಿದರು.ಈರ್ವರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಕಳೆದೆ ಕೆಲ ದಿನಗಳಿಂದ ರಾಜ್ಯ ಪ್ರವಾಸದಲ್ಲಿರುವ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯದ ಸಚಿವರು, ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಜೊತೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದರು.ನಿನ್ನೆ ಮಾದರ ಚೆನ್ನಯ್ಯ ಸ್ವಾಮೀಜಿ,ಹಾಗೂ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಹಾಗೂ ಇತರ ಪ್ರಮುಖ ನಾಯಕರನ್ನು ಅವರು ಭೇಟಿ ಮಾಡಿದ್ದರು.

ಇಂದು ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾ ಗಿದೆ.ನಿನ್ನೆಯ ಬೆಂಗಳೂರಿನಲ್ಲಿದ್ದರೂ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡದೆ ಏಕಾಏಕಿ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಶಿವಮೊಗ್ಗಕ್ಕೆ ತೆರಳಿ ಮಾಜಿ ಮುಖ್ಯ ಮಂತ್ರಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಅಲ್ಲದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀ ನಾಮೆ ನೀಡಿದ ಬಳಿಕ ರಾಜ್ಯ ಪ್ರವಾಸ ಕೈಗೊಂಡಿರುವುದು ಹಾಗೂ ಆರೋಗ್ಯ, ರಾಜಕೀಯ ಬೆಳವಣಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

More News

You cannot copy content of this page