ಹಾವೇರಿ : ಸುಮಾರು 256ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ಆಗಮಿಸಿದರು. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರನ್ನು, ಕೃಷಿ ಸಚಿವ ಬಿ ಸಿ ಪಾಟೀಲ ಬರಮಾಡಿಕೊಂಡರು. ಇವರ ಜೊತೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.