ಬೆಂಗಳೂರು : ಮೇಜರ್ ಧ್ಯಾನ್ ಚಂದ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿ.ರಾತ್ರಿ ಚಂದ್ರನ ಬೆಳಕಿನಲ್ಲಿಯೂ ಕ್ರೀಡಾಭ್ಯಾಸ ಮಾಡುತ್ತಿದ್ದ ಕಾರಣ ಧ್ಯಾನ್ ಸಿಂಗ್ ಅವರು ಮುಂದೆ ಧ್ಯಾನ್ ಚಂದ್ ಎಂದೇ ಪ್ರಸಿದ್ಧಿ ಯಾದರು. ಅವರಂತೆ ಪ್ರತಿಯೊಬ್ಬ ಕ್ರೀಡಾಪಟುವು ಶೃದ್ಧೆಯಿಂದ ಕ್ರೀಡಾಭ್ಯಾಸ ಮಾಡಬೇಕು ಎಂದು ಕ್ರೀಡಾ ಸಚಿವ ನಾರಾಯಣಗೌಡ ಸ್ಮರಿಸಿದ್ದಾರೆ.
ಬೆಂಗಳೂರಿನ ಅಕ್ಕಿತಿಮ್ಮಯ್ಯ ಹಾಕಿ ಕ್ರೀಡಾಂಗಣದಲ್ಲಿ ಕ್ರೀಡಾದಿನಾ ಚರಣೆ ಉದ್ಘಾಟಿಸಿ ಮಾತನಾಡಿದ ಸಚಿವರು,ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸತತ ಮೂರು ಓಲಂಪಿಕ್ ನಲ್ಲಿ ಚಿನ್ನದ ಪದಕ ಗಳಿಸಿದ ಭಾರತದ ಹಾಕಿ ತಂಡದ ಭಾಗವಾಗಿದ್ದರು.ಅವರ ಹೆಸರಿನಲ್ಲಿ ಪ್ರತಿ ವರ್ಷ ಕ್ರೀಡಾ ದಿನವನ್ನು ಆಚರಿಸ ಲಾಗುತ್ತಿದೆ.ಖೇಲ್ ರತ್ನ ಪ್ರಶಸ್ತಿ ಯನ್ನು ಧ್ಯಾನ್ ಚಂದ್ ಖೇಲ್ ರತ್ ಪ್ರಶಸ್ತಿ ಎಂದು ಮರುನಾಕರಣ ಮಾಡಿ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಿಂದ ಪ್ರಶಸ್ತಿ ನೀಡುವ ಮೂಲ ಅವರಿಗೆ ಗೌರವ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.
ಕ್ರೀಡೆಗೆ ಬೆಂಬಲ ನೀಡುವ ಹಿನ್ನಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಖೇಲೊ ಇಂಡಿಯಾ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಪ್ರತಿ ತಾಲೂಕಿನಲ್ಲೂ ಕ್ರೀಡಾಂಗಣ ನಿರ್ಮಿಸಲಿದ್ದೇವೆ.ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸು ತ್ತಿದ್ದೇವೆ.ಆ ಮೂಲಕ ಕ್ರೀಡೆಗೆ, ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತಿದ್ದೇವೆ.ಮುಂದಿನ ಓಲಂಪಿಕ್ ಗೆ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ.ಅದಕ್ಕಾಗಿ ಅಮೃತ ಕ್ರೀಡಾ ದತ್ತು ಯೋಜನೆ ಜಾರಿಗೆ ತಂದಿದ್ದೇವೆ.ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ದಿನ ಒಂದು ಗಂಟೆ ಕ್ರೀಡೆಗೆ ಮೀಸಲಿ ಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರಾಧಿಕಾರ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ಕ್ರೀಡಾ ದಿನಾಚರಣೆಯಲ್ಲಿ ಸಚಿವರು ಪಾಲ್ಗೊಂಡರು.ವಿವಿಧ ವಯೋಮಾನದವರಿಗೆ ಆಯೋಜಿಸಿದ್ದ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಸಚಿವರು ಪದಕ ಪ್ರದಾನ ಮಾಡಿದರು. ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯ ನ್ನು ಸಚಿವ ನಾರಾಯಣಗೌಡ ಉದ್ಘಾಟಿಸಿದರು. ಇದೆ ವೇಳೆ ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾಗಿರುವ ಅಂಕಿತ ಅವರನ್ನು ಸನ್ಮಾನಿಸಲಾಯಿತು.