ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ 4 ದಿನಗಳು ರಾಜ್ಯ ಪ್ರವಾಸ : ಬಿಜೆಪಿಯಲ್ಲಿ ಗದಿಗೆದರಿದ ಚಟುವಟಿಕೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು  ರಾಜ್ಯದ  ಉಸ್ತುವಾರಿ ಆದ ಅರುಣ್ ಸಿಂಗ್‍ ನಾಲ್ಕು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಿದ್ದಾರೆ.ಆಗಸ್ಟ್ 30 ರಂದು ಸಂಜೆ ನಗರಕ್ಕೆ ಆಗಮಿ ಸಲಿದ್ದು ಬಳಿಕ ಮೈಸೂರಿಗೆ ತೆರಳಲಿದ್ದಾರೆ.

ಆಗಸ್ಟ್ 30 ರಂದು ಮೈಸೂರಿನ ಸರ್ಕಾರಿ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದು,ಆಗಸ್ಟ್ 31 ರಂದು ಬೆಳಿಗ್ಗೆ 8:00 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ,ಜಿಲ್ಲಾ ಕೋರ್ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಕಾರ್ಯಾಲಯ ಮಾಹಿತಿ ನೀಡಿದೆ.

ಸೆಪ್ಟೆಂಬರ್ 1ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆಯು ಚನ್ನರಾಯಪಟ್ಟಣದಲ್ಲಿ ನಡೆಯಲಿದ್ದು,ಜಿಲ್ಲಾ ಕೋರ್‍ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಯಲ್ಲಿ ಭಾಗವಹಿಸಲಿದ್ದಾರೆ.ಸೆಪ್ಟೆಂಬರ್ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕರ ಭವನದಲ್ಲಿ ಬೆಂಗಳೂರು ಉತ್ತರ,ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2:45ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಅಲ್ಲಿ ಅವರು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು,ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತಲುಪಿ ಕೆಕೆ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಇರಲಿದ್ದಾರೆ. ಸೆಪ್ಟೆಂಬರ್ 3 ರಂದು ಬೆಳಿಗ್ಗೆ 7:15 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಕಾರ್ಯಾಲಯ ಮಾಹಿತಿಯಲ್ಲಿ ತಿಳಿಸಿದ್ದಾರೆ.

ಅರುಣ್ ಸಿಂಗ್ ರಾಜ್ಯ ಪ್ರವಾಸದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಚಟುವಟಿಕೆ ಗರಿದೆದರಿಗೆ.ಸಚಿವ ಸ್ಥಾನಾ ಕಾಂಕ್ಷಿಗಳು ಖಾಲಿ ಇರುವ ಸ್ಥಾನಗಳಿಗೆ ಭರ್ತಿಗೆ ತಮ್ಮನ್ನು ಪರಿಗಣಿಸುವಂತೆ ದುಂಬಾಲು ಬೀಳುವ ಸಾಧ್ಯತೆ ಇದೆ.ಜೊತೆಗೆ ಖಾತೆ ಬದಲಾವಣೆಗೆ ಪಟ್ಟು ಹಿಡಿದರುವ ಸಚಿವಆನಂದ್ ಸಿಂಗ್,ಎಂಟಿಬಿ ನಾಗರಾಜ್,ಶ್ರೀರಾಮುಲು,ಶಂಕರ ಪಾಟೀಲ್ ಮುನೇನಕೊಪ್ಪ, ಶೆಶಿಕಲಾ ಜೊಲ್ಲೆ ಸೇರಿದಂತೆ ಹಲವಾರು ಸಚಿವರು ಅರುಣ್ ಸಿಂಗ್ ಭೇಟಿಗಾಗಿ ಹಾತೊರೆಯುತ್ತಿದ್ದಾರೆ. ಮುಂಬರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ  ಹಿನ್ನಲೆಯಲ್ಲಿ ಟಿಕೆಟ್ ಗಾಗಿಯೂ ಕೆಲವರು ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

More News

You cannot copy content of this page