ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಕರಾವಳಿ, ಆಂಧ್ರದ ಕರಾವಳಿ, ಒರಿಸ್ಸಾ ರಾಜ್ಯದ ಕರಾವಳಿ ಭಾಗದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇಂದಿನಿಂದ ಮುಂದಿನ ಮೂರು ದಿನಗಳ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿ, ಆಂಧ್ರ ಕರಾವಳಿ ಮತ್ತು ಓರಿಸ್ಸಾ ಭಾಗಗಳಲ್ಲಿ ಉಂಟಾದ ವಾಯುಭಾರ ಕುಸಿತ ನಮ್ಮ ರಾಜ್ಯದ ಮೇಲೂ ಪರಿಣಾಮ ಬೀರಿದೆ, ಇದು ಸೆಪ್ಟೆಂಬರ್ 1 ರ ವರೆಗೆ ಮುಂದುವರೆಯಲಿದೆ ಎಂದು ತಿಳಿಸಿದೆ. ಆದ್ದರಿಂದ ಈ ಭಾಗದಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಆರೇಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.