ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿ ರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಅತಿವೃಷ್ಟಿ ಯಿಂದ ಭೂ ಕುಸಿತವಾದ ಪ್ರದೇಶಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ಮಾತನಾಡಿದರು.ನಂತರ ಸ್ಥಳೀಯ ಗ್ರಾಮಸ್ಥರ ಮನವಿ ಸ್ವೀಕರಿಸಿದ ಅವರು,ಬೆಂಗ ಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.ಈಗಾಗಲೇ ಮುಖ್ಯಮಂತ್ರಿ ಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ.ಅನುದಾನ ನೀಡಿದ್ದಾರೆ. ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು,ಪಿಡಬ್ಲ್ಯೂಡಿ ಇಲಾಖೆಯಿಂದ ಕಳಚೆ ಹಾಗೂ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗು ವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ,ಜನರು ಭಯ ಪಡುವ ಅಗತ್ಯವಿಲ್ಲ.ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು.ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವರ ಸಹಕಾರದೊಂದಿಗೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಿದರು.