ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳ ಪರ ಮತಯಾಚನೆ – ಬಿ ಎ ಬಸವರಾಜ

ಕಲಬುರಗಿ : ಸೆಪ್ಟಂಬರ್ 3 ರಂದು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಎರಡನೇ ದಿನವಾದ ಇಂದು ಸಹ ಕಲಬುರಗಿ ಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡರು.ಇಂದು ಬೆಳಿಗ್ಗೆ ‌ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಆದರಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಿ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಶ್ರೀ ಉಮೇಶ್ ಶೆಟ್ಟಿ ಸೇರಿದಂತೆ ‌ ಜಿಲ್ಲೆಯ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

More News

You cannot copy content of this page