ಬೆಂಗಳೂರು : ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎನ್ನುವುದರ ಕುರಿತು ಇಂದು ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆ ಆಧಾರದ ಮೇಲೆ ರಾಜ್ಯ ಸರ್ಕಾರದ ನಿರ್ಧಾರ ಹೊರಬೀಳಲಿದೆ.
ಕೊರೊನಾ ಮೂರನೇ ಅಲೆಯ ಭೀತಿಯ ನಡುವೆಯೇ ರಾಜ್ಯದಲ್ಲಿ ಒಂಭತ್ತು, ಹತ್ತು ಮತ್ತು ಪಿಯುಸಿ ತರಗತಿಗಳು ಆರಂಭವಾಗಿವೆ. ಆರಂಭದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಮಟ್ಟದಲ್ಲಿತ್ತು. ನಂತರದ ದಿನಗಳಲ್ಲಿ ಹಾಜರಾತಿ ಸಂಖ್ಯೆ ಏರಿಕೆ ಕಂಡಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದರ ನಡುವೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭ ಕುರಿತು ಇಂದು ಶಿಕ್ಷಣ ಸಚಿವರು ಹಾಗೂ ತಾಂತ್ರಿಕ ಸಲಹಾ ಸಮಿತಿ ನೀಡುವ ವರದಿ ಪರಿಗಣಿಸಿ ನಿರ್ಧಾರ ಹೊರಬೀಳಲಿದೆ.