ಬೆಂಗಳೂರು : 6 ರಿಂದ 8ನೇ ತರಗತಿ ಮಕ್ಕಳಿಗೆ,ಸೆಪ್ಟೆಂಬರ್ ಆರರಿಂದ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರವನ್ನು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ವಾಗತಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು “ಮಕ್ಕಳಿಗೆ,ಅದರಲ್ಲಿಯೂ ಗ್ರಾಮೀಣ ಭಾಗದ ಮಕ್ಕಳಿಗೆ ಇದು ಅತ್ಯಂತ ಅಗತ್ಯವಿತ್ತು.ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿಗಳನ್ನು ಸೆಪ್ಟೆಂಬರ್ 6 ರಿಂದ ಆರಂಭಿಸುವ ಸರ್ಕಾರದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.ಮಕ್ಕಳ ಹಿತ ಹಾಗೂ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಯೋಗ್ಯ ನಿರ್ಧಾರವೆಂದು ಬಣ್ಣಿಸಿದ್ದಾರೆ.