ಪ್ರಕೃತಿ ಚಿಕಿತ್ಸೆ ಮುಗಿಸಿ ನಾಳೆ ಮನೆಗೆ ತೆರಳಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ನಾಳೆ (ಮಂಗಳವಾರ) ವಾಪಸ್ಸಾಗುವರು.

ಆಗಸ್ಟ್ 21 ರಂದು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದು ಅವರು ನಾಳೆ ಆಗಸ್ಟ್ 31ರಂದು ಚಿಕಿತ್ಸಾ ಕೇಂದ್ರದಿಂದ ವಾಪಸ್ಸಾಗಲಿದ್ದಾರೆ.ಬಳಿಕ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

2019ರ ಮೈತ್ರಿ ಸರ್ಕಾರದ ಅವಧಿಯಲ್ಲೂ ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನದಲ್ಲಿ 10 ದಿನಗಳ ಪ್ರಕೃತಿ  ಚಿಕಿತ್ಸೆ ಪಡೆದು ಬಂದಿದ್ದರು.ಈ ವೇಳೆ ಮೈತ್ರಿ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದರು.ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿ ತ್ತು.ಹೀಗಾಗಿ ಕಳೆದ ಭಾರಿ ತಪ್ಪು ಸಂಭವಿಸದಂತೆ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿದ್ದಾಗ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಭೇಟಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಬಂಧ ವಿಧಿಸಿದ್ದರು.ಈ ನಡುವೆಯೂ ಚಾಮರಾಜ ಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸಿದ್ದರಾಮಯ್ಯ ಅವರನ್ನು ಜಿಂದಾಲ್ ನಲ್ಲಿ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.

More News