ನವದೆಹಲಿ :ಇಂದು ಮಹತ್ವದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನವದೆಹಲಿ ಯಲ್ಲಿ ನಡೆಯಲಿದೆ.ಸಭೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಕುರಿತು ರಾಜ್ಯ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.ಎಂದಿನಂತೆ ತಮಿಳುನಾಡು ಕರ್ನಾಟಕದ ಯೋಜನೆ ಜಾರಿಗೆ ವಿರೋಧ ವ್ಯಕ್ತಪಡಿಸಲಿದೆ.
ಇತ್ತೀಚಗೆ ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ನ್ನು ಭೇಟಿ ಮಾಡದ ಮುಖ್ಯಮಂ ತ್ರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಮೇಕೆದಾಟು ಯೋಜನೆ ಜಾರಿಗೆ ಇರುವ ಅಡ್ಡಿ ಆತಂಕ ನಿವಾ ರಣೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು.ಆದರೆ ತಮಿಳುನಾಡು ಮತ್ತು ಪಾಂಡಿಚೆರಿ ಸರ್ಕಾರಗಳು ಮೇಕೆದಾಟು ಯೋಜನೆಯನ್ನು ವಿರೋಧಿಸಿ ನಿರ್ಣಯ ಕೈಗೊಂಡಿವೆ.
ಕಾವೇರಿ ನದಿ ಪಾತ್ರದ ತಮಿಳುನಾಡು ಮತ್ತು ಪಾಂಡಿಚೆರಿ ಸರ್ಕಾರಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದರಲ್ಲಿ ಇಂದಿನ ಸಿಡಬ್ಲ್ಯೂಎಂಎ ಸಭೆಯು ಯಾವ ತೀರ್ಮಾನವನ್ನು ಕೈಗೊಳ್ಳಲಿ ಎಂಬುದು ಎಲ್ಲರ ಕುತೂಹಲವನ್ನು ಹೆಚ್ಚಿಸಿದೆ.ಇಂದಿನ ಸಭೆ ಯಲ್ಲಿ ತಮಿಳುನಾಡಿನ ವಿರೋ ಧದ ನಡುವೆಯೂ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನಾ ವರದಿಗೆ ಪ್ರಸ್ತಾವನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅನುಮೋದನೆ ನೀಡಿದರೆ ಬಳಿಕ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗ ಅನುಮೋದನೆಗೆ ರವಾನಿಸಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವರ ಭೇಟಿ ಹಾಗೂ ಸಿಡಬ್ಲ್ಯೂಎಂಎ ಸಭೆ ಹಿನ್ನಲೆಯಲ್ಲಿ ಎಚ್ಚೆತ್ತುಕೊಂ ಡಿರುವ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದೆ.ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಕರ್ನಾಟಕ ಸರ್ಕಾರದ ವಿಸ್ತೃತ ಯೋಜನಾ ವರದಿಯನ್ನು ವಜಾಗೊಳಿಸಲು ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ.