ನಾಳೆ ರಾಜ್ಯಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್,ಅಮಿತ್ ಷಾ ಭೇಟಿ

ಬೆಂಗಳೂರು : ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವಅಮಿತ್ ಷಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದಾರೆ. ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಮಗಳಾದ ಅರ್ಪಿತಾ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಈ ವೇಳೆ ಅಮಿತ್ ಷಾ ದಾವಣಗೆರೆಯಲ್ಲಿ ಗಾಂಧಿ ಭವನ,ಹರಿಹರದ ಕೊಂಡಜ್ಜಿಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ,ಜಿಎಂಐಟಿ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ.ಮತ್ತೊಂದೆಡೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರವಾದಲ್ಲಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಲಿದ್ದು ಸಂಜೆ ಹುಬ್ಬಳ್ಳಿಗೆ ಆಗಮಿಸಿ ಪ್ರಹ್ಲಾದ್ ಜೋಶಿ ಪುತ್ರಿ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಇನ್ನೂ ಹಲವಾರು ಸಚಿವರು,ಕೇಂದ್ರದ ರಾಜ್ಯ ಖಾತೆ ಸಚಿವರು,ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ರಾಜ್ಯ ಸರ್ಕಾರದ ಸಚಿವ ಸಂಪುಟದ ಹಲವಾರು ಸಚಿವರು,ಮಾಜಿ ಮುಖ್ಯಮಂತ್ರಿಗಳು,ವಿಪಕ್ಷ ನಾಯ ಕರು ಸೇರಿದಂತೆ ಪ್ರಮುಖ ರಾಜಕೀಯ ನಾಯಕರೆಲ್ಲರೂ ಪ್ರಹ್ಲಾದ್ ಜೋಶಿ ಮಗಳ ಕಾರ್ಯಕ್ರಮದ ನೆಪದಲ್ಲಿ  ಹುಬ್ಬಳ್ಳಿಗೆ ಆಗಮಿ ಸಲಿದ್ದಾರೆ.

More News