ಬೆಂಗಳೂರು : ಕೊರೊನಾದಿಂದ ಸಂಕಷ್ಟಕ್ಕೊಳಗಾಗಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೆ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದೆಡೆಯಾದರೆ, ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆ ಮತ್ತೊಂದೆಡೆ. ಕೇಂದ್ರ ಸರ್ಕಾರ ಇಂದಿನಿಂದ ಪ್ರತಿ ಸಿಲಿಂಡರ್ ಹೆ 25 ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದ ಕಳೆದಹದಿನೈದು ದಿನಗಳಲ್ಲಿ 50 ರೂಪಾಯಿ ಏರಿಕೆ ಕಂಡಂತಾಗಿದೆ. ಕಳೆದ ಹದಿನೈದು ದಿನಗಳು ಅಂದರೆ ಆಗಸ್ಟ್ 1 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆಗಸ್ಟ್ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25ರೂಪಾಯಿ ಏರಿಕೆ ಮಾಡಲಾಗಿತ್ತು. ಅದಾದ ನಂತರ ಈಗ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಮತ್ತೆ 25 ರೂಪಾಯಿ ಹೆಚ್ಚಿಸಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆಎಳೆದಂತಾಗಿದೆ. ಬೆಂಗಳೂರಿನಲ್ಲಿ 14.2 ಕೆ.ಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗೆ 862 ರೂಪಾಯಿ ಇತ್ತು. ಇದು ಪ್ರತಿ ಸಿಲಿಂಡರ್‌ಗೆ 887 ರೂಪಾಯಿ ಬೆಲೆ ಏರಿಕೆ ಕಂಡಿದೆ. 2021ರ ಜನವರಿಯಿಂದ ಸೆಪ್ಟೆಂಬರ್ 1ರವರೆಗೆ ಅಡುಗೆ ಸಿಲಿಂಡರ್ ಬೆಲೆ ಒಟ್ಟು 190 ರೂಪಾಯಿ ಹೆಚ್ಚಳವಾಗಿದೆ.