ಆದಾಯ ತೆರಿಗೆ ಇಲಾಖೆ ಕಚೇರಿ ಕಟ್ಟಡಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಬೆಂಗಳೂರು : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ನಗರದ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಅದೇ ಸ್ಥಳದಲ್ಲಿ ಶಿಲಾನ್ಯಾಸದ ಫಲಕವನ್ನೂ ಅನಾವರಣ ಮಾಡಿದರು.ಇಲ್ಲಿ ನಿರ್ಮಾಣವಾಗಲಿ ರುವ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡವು ನೆಲಮಹಡಿ ಮತ್ತು 18 ಮಹಡಿಗಳನ್ನು ಮತ್ತು ನೆಲಮಾಳಿ ಗೆಯಲ್ಲಿ ವಾಹನ ನಿಲುಗಡೆಯ ಸೌಲಭ್ಯ ಒಳಗೊಂಡಿರುತ್ತದೆ.

ಕಟ್ಟಡವು ಗರಿಷ್ಠ ನೈಸರ್ಗಿಕ ಬೆಳಕನ್ನು ಬಳಸಿಕೊಂಡಿದ್ದು,ವಿದ್ಯುತ್ ಉತ್ಪಾದನೆಗೆ ಸೌರ ಫಲಕ ಗಳನ್ನು ಒಳಗೊಂಡಿದೆ.ಮಳೆ ನೀರು ಕೊಯ್ಲು ವ್ಯವಸ್ಥೆಯಿಂದ ವಿನ್ಯಾಸಿತವಾಗಿದೆ.ಎರಡು ಕೊಳಾಯಿ ವ್ಯವಸ್ಥೆಯೊಂದಿಗೆ ಮರುಬಳಕೆಯ ನೀರನ್ನು ಕೈತೋಟಕ್ಕೆ ಬಳಸ ಲಾಗುತ್ತದೆ. ಮ್ಯಾಗ್ನೆಟಿಕ್ ಫಿಲ್ಟರ್ ಸಹಿತವಾದ ಕೇಂದ್ರೀಕೃತ ವಾಯು ಸ್ವಚ್ಛತೆ ವ್ಯವಸ್ಥೆ ಮತ್ತು ಯುವಿ-ಕಿರಣ ಕ್ರಿಮಿನಾಶಕವನ್ನು ಅಳವಡಿಲಾಗಿದೆ.ಕಟ್ಟಡವನ್ನು ಸಿಪಿಡಬ್ಲ್ಯುಡಿಯ ಬೆಂಗಳೂರು ಯೋಜನಾ ವೃತ್ತ ನಿರ್ಮಿಸುತ್ತದೆ.

ಈ ಸುಸಜ್ಜಿತ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಆದ್ಯತೆಯ ಮೇಲೆ ನಿವಾರಿಸಲು ಪ್ರತ್ಯೇಕವಾದ ಸಾರ್ವಜನಿಕ ಸಂಪರ್ಕ ಕಚೇರಿ ಮತ್ತು ತೆರಿಗೆ ಪಾವತಿದಾರರಿಗೆ ಸರದಿಗಾಗಿ ಕಾದು ಕುಳಿತುಕೊಳ್ಳುವ ಆವರಣವೂ ಇರುತ್ತದೆ.ಇದು ಯಾವುದೇ ತೊಡಕು ರಹಿತ ತೆರಿಗೆದಾರ0ರ ಸೇವೆಗಳನ್ನು ಒದಗಿಸಲು ಆದಾಯಕರ ಸೇವಾ ಕೇಂದ್ರವನ್ನು ಹೊಂದಿರುತ್ತದೆ.ಕೇಂದ್ರ ಸ್ಥಾನದಲ್ಲಿ ರುವ ಈ ಕಚೇರಿ ಕಟ್ಟಡವು ತೆರಿಗೆದಾರ ಸ್ನೇಹಿಯಾಗಿದೆ.ಕಟ್ಟಡದ ವಿನ್ಯಾಸ ಮತ್ತು ಜಾಗದ ಹಂಚಿಕೆಯು ಆದಾಯ ತೆರಿಗೆ ಇಲಾಖೆ ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನುಕೂಲಕರವಾದ ಕಾರ್ಯ ವಾತಾವರಣವನ್ನು ಒದಗಿಸುತ್ತದೆ.

More News

You cannot copy content of this page