ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿದರು. ಆರ್ ಟಿ ನಗರದಲ್ಲಿರುವ ಅವರ ನಿವಾಸದ ಮುಂದೆ ನಿಂತಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲವು ಸಮಸ್ಯೆಗಳಿಗೆ ಅವರು ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರೆ, ಇನ್ನು ಅನೇಕ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅನೇಕ ಅಧಿಕಾರಿಗಳು ಹಾಜರಿದ್ದರು.