ಬೆಳಗಾವಿ : ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಷಮತೆ ಹೆಚ್ಚಿಸಲು,ಸರಕಾರವು,ಇಲಾಖೆಗೆ ಬೇಕಾದ,ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಲು ಬದ್ಧವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ತಿಳಿಸಿದ್ದಾರೆ.
ನಗರದಲ್ಲಿಂದು ಕೆಎಸ್ ಆರ್ ಪಿ ವತಿಯಿಂದ ಆಯೋಜಿಸಲಾದ ನೂತನ ಅಭ್ಯರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಲಾಖೆಗೆ ಬೇಕಾದ ಆಧುನಿಕ ವಾಹನಗಳ ಸೌಕರ್ಯಗಳೂ ಒಳಗೊಂಡಂತೆ ಎಲ್ಲ ರೀತಿಯ ಸವಲತ್ತುಗಳನ್ನು ಪೂರೈಸಲು ಕ್ರಮ ಕೈಗೊಂಡಿದೆ .ಸರಕಾರವು ಕಳೆದ ಮೂರು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ ಆದ್ಯತೆಯ ಮೇರೆಗೆ ಅನುದಾನವನ್ನು ಬಿಡುಗಡೆ ಮಾಡಿದ್ದು,ವಾಹನಗಳು ಮತ್ತು ಶಸ್ತಾಸ್ತ್ರಗಳ ಪೂರೈಕೆ ಹಾಗೂ ಆಧುನಿಕ ಫೋರೆನ್ಸಿಕ್ ಲ್ಯಾಬೋರೇಟರಿಗಳ ಹೊಸ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಬೆಳಗಾವಿ ನಗರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ ನಡೆಸಿದ್ದು,ಶಾಂತಿ ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಅಪರಾಧ ಪ್ರಕರಣಗಳ ಪತ್ತೆ ಹಾಗೂ ಅಪರಾಧ ಸಾಬೀತು ವಿವರಗಳ ಬಗ್ಗೆ ಚರ್ಚಿಸಲಾಗಿದೆ.ಕೆಎಸ್ಆರ್ಪಿ ಮುಖ್ಯಸ್ಥ ಹಾಗೂ ಎಡಿಜಿಪಿ ಅಲೋಕ್ ಕುಮಾರ್,ನಗರ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.