ಪುತ್ರನಿಗೆ ಮಂತ್ರಿ ಸ್ಥಾನಕ್ಕಾಗಿ ಯಡಿಯೂರಪ್ಪ ಪಟ್ಟು : ಹೈಕಮಾಂಡ್ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಕಸರತ್ತು..?!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ.ವಿಜಯೇಂದ್ರನಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಡ ಹೇರಿದ್ದಾರೆ.ಇದೇ ಕಾರಣಕ್ಕೆ ಮುಖ್ಯಮಂತ್ರಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಸಚಿವಾಕಾಂಕ್ಷಿ ಗಳು ಒತ್ತಡ ಹೇರುತ್ತಿದ್ದು, ವಿಶೇಷವಾಗಿ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಪದೇ ಪದೇ ಒತ್ತಡ ಹಾಕುತ್ತಿದ್ದಾರೆನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರ ಅನುಮತಿ ಪಡೆಯಲು ಮುಖ್ಯ ಮಂತ್ರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಗೆ ದೆಹಲಿಗೆ ಎರಡು ಬಾರಿ ಪ್ರವಾಸ ಮಾಡಿದ್ದಾರೆ.ಬಿಜೆಪಿ ರಾಷ್ಟ್ರೀಯ ನಾಯಕರು ಸಧ್ಯಕ್ಕೆ ಸಂಪುಟ ವಿಸ್ತರಣೆ ಮಾಡಲು ಅನುಮತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.ಇದೇ ಕಾರಣಕ್ಕೆ ಕಳೆದ ಬಾರಿಯ ಸಿಎಂ ದೆಹಲಿಯ ಭೇಟಿಯ ಸಂದರ್ಭದಲ್ಲಿಯೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮುಖ್ಯಮಂತ್ರಿ ಭೇಟಿಗೆ ಅವಕಾಶ ನೀಡಿ ರಲಿಲ್ಲ ಎಂದು  ದೆಹಲಿಯ ಉನ್ನತ ಮೂಲಗಳು ಹೇಳುತ್ತಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿ, ದಾವಣಗೆರೆಯಲ್ಲಿ ಭೇಟಿ ಮಾಡಿದಾಗಲೂ ಅವರು ನಡ್ಡಾ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ಸೂಚಿಸಿದ್ದರು ಎನ್ನಲಾಗಿದೆ.

ನಾಲ್ಕು ಸಚಿವ ಸ್ಥಾನಕ್ಕೆ 15 ಶಾಸಕರು ಪೈಪೋಟಿ : ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಮುಂಗಾರು ಅಧಿವೇಶನಕ್ಕೂ ಮುನ್ನವೇ ಭರ್ತಿ ಮಾಡುವಂತೆ ಸಚಿವಾಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ.ವಿಶೇಷವಾಗಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ,ಬಸನಗೌಡ ಪಾಟೀಲ್ ಯತ್ನಾಳ್,ಸಿ.ಪಿ.ಯೋಗೇ ಶ್ವರ್,ರಾಜುಗೌಡರನ್ನು ಸಚಿವ ಸಂಫುಟಕ್ಕೆ ಸೇರಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸುತ್ತಿದ್ದಾರೆ.ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರ ಹಾಗೂ ರಾಜುಗೌಡರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಪ್ರಬಲ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು.ಒಂದು ವೇಳೆ,ಸಂಪುಟ ವಿಸ್ತರಣೆ ವಿಳಂಬ ಮಾಡಿ ದರೆ ತಮ್ಮ ಬೆಂಬಲಿಗ ಶಾಸಕರ ಸಭೆ ಕರೆದು ಚರ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳೆಯದಲ್ಲಿ ಕೇಳಿ ಬರುತ್ತಿದೆ.ಇದರ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಒಂದು ಸ್ಥಾನ ಖಾಲಿ ಇಟ್ಟು,ಅವರ ವಿರುದ್ಧದ ಆರೋಪ ಪ್ರಕರಣ ಇತ್ಯರ್ಥವಾದ ಬಳಿಕ ಸಂಪುಟಕ್ಕೆ ಸೇರಿಸಿಕೊಳ್ಳುವ  ಸಾಧ್ಯತೆ ಹೆಚ್ಚಿದೆಯಂತೆ.

ಸಮಯ ಕೇಳಿದ ಬೊಮ್ಮಾಯಿ: ತಮ್ಮ ಪುತ್ರನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಡ ಹಾಕುತ್ತಿರುವ ಯಡಿಯೂರಪ್ಪ ಅವ ರನ್ನು ದೆಹಲಿಗೆ ತೆರಳುವ ಮುನ್ನ ಭೇಟಿ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಈ ಕುರಿತು ತಾವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಿ ಶೀಘ್ರ ತೀರ್ಮಾನಿಸುವು ದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.ಅದಕ್ಕಾಗಿ ಸ್ವಲ್ಪ ಸಮಯಾ ವಕಾಶ ನೀಡುವಂತೆ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪದೆ ಪದೇ  ದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸಂಪುಟ ವಿಸ್ತರಣೆಗೆ ಅನು ಮೋದನೆ ಪಡೆದುಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರನೇ ವರ್ಷಕ್ಕೆ ಮುಂದಡಿಯಿಟ್ಟಿದೆ.ಬಿಜೆಪಿ ಸರ್ಕಾರದ ಎರಡನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿ 29 ಜನ ಸಚಿವ ಸಂಪುಟ ರಚನೆಯಾದರೂ ಆಡಳಿತ ಸರಿದಾರಿಗೆ ಬಂದಿಲ್ಲ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರದ ಆಡಳಿತ ಯಂತ್ರ,ಸಚಿವರನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಸರ್ಕಸ್ ಮಾಡುತ್ತಿದ್ದು, ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಲು ಸಾಧ್ಯವಾಗಿಲ್ಲದಿರುವುದು ತಲೆಬೇನೆಗೆ ಕಾರಣವಾಗಿದೆ.

ಈ ನಡುವೆ ಖಾತೆ ಬದಲಾವಣೆ ಗೊಂದಲ,ಉಳಿದ ನಾಲ್ಕು ಸಚಿವ ಸ್ಥಾನಅನುದಾನ ಬಿಡುಗಡೆಯಲ್ಲಿ ವಿಳಂಬ, ಅನುದಾನ ಮತ್ತು ಯೋಜನೆ ತಾರತಮ್ಯಗಳು ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರನ್ನು ಕರೆಳಿಸಿದೆ.ಇವೆಲ್ಲವನ್ನು ಸರಿದೂರಿಗಿಸಿಕೊಂಡು ಹೋಗುವು ದರಲ್ಲೇ ಮುಖ್ಯಮಂತ್ರಿಗೆ ಸಾಕು ಸಾಕಾಗಿದೆ ಎನ್ನಲಾಗಿದೆ.

More News

You cannot copy content of this page