ವಾರಂತ್ಯ ಕರ್ಪ್ಯೂ ರದ್ದು: ಕೇರಳ,ಮಹರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಿದ್ದ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಪಡಿಸಿದೆ.

ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಗಡಿ ಜಿಲ್ಲೆಗಳಲ್ಲಿ ಶಾಸಕರ,ಸಚಿವರು ಸರಕಾರವನ್ನ ಒತ್ತಾಯಿಸಿದ್ದರು.

ಆದಾಗ್ಯೂ ಆಯಾ ಜಿಲ್ಲಾಧಿಕಾರಿಗಳು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ರದ್ದುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಬಹುದು.ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಆದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್ ಶೇ.0.73ರಷ್ಟಿದೆ.ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇತ್ತು. ಇದೀಗ ಕಡಿಮೆಯಾಗಿದೆ.ಈ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಆದೇಶ ರದ್ದು ಮಾಡಲಾಗಿದೆ.ಸೋಂಕು ಹೆಚ್ಚಳ ಆದರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಕೋವಿಡ್ ಸಂಬಂಧಿಸಿದ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರು,ಪೊಲೀಸ್ ಆಯುಕ್ತರು ಸರ್ಕಾರದ ಮಾರ್ಗಸೂಚಿಯ ಅನ್ವಯ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

More News

You cannot copy content of this page