ನವದೆಹಲಿ : ಮುಂಬರುವ ಅಕ್ಟೋಬರ್ 17ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನ ಆಯ್ಕೆ ಮಾಡಲಾಗಿದೆ.
ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನಪಡೆದಿದ್ದಾರೆ. ಅದರಂತೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು 15 ಆಟಗಾರರನ್ನು ಆಯ್ಕೆ ಮಾಡಿದೆ.
ಯುಎಇ ಮತ್ತು ಓಮನ್ ನಲ್ಲಿ ನಡೆಯಲಿರುವ ವಿಶ್ವ ಕಪ್ ಟೂರ್ನಿಯಲ್ಲಿ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್, ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಅವರು ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿಯಲ್ಲಿ ಸೀಮಿತ ಓವರ್ ಗಳ ತಂಡಕ್ಕೆ ನಾಯಕರಾಗಿದ್ದ ಶಿಖರ್ ಧವನ್ ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದೆ.
ಐಪಿಎಲ್ ನಲ್ಲಿ ಅತ್ಯುತ್ತಮ ಆಟವಾಡಿದ್ದ ಅಶ್ವಿನ್ ಅವರು ತಂಡಕ್ಕೆ ಆಸ್ತಿ ಇದ್ದಂತೆ. ತಂಡ ಉತ್ತಮ ಫಲಿತಾಶ ಪಡೆಯಲು ಅಶ್ವಿನ್ ಆಯ್ಕೆಯಿಂದ ಸಾಧ್ಯ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.
ಟ್ವೆಂಟಿ -20 ವಿಶ್ವಕಪ್ ಟೂರ್ನಿಯಭಾರತ ತಂಡ
ವಿರಾಟ್ ಕೊಯ್ಲಿ(ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ವರುಣ್ಚಕ್ರವರ್ತಿ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ.
ಕಾಯ್ದಿರಿಸಿದ ಆಟಗಾರರು
ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಶ್ರೇಯಸ್ ಅಯ್ಯರ್.