ಬೆಂಗಳೂರು : ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಸತಿ ಸಚಿವರಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು,ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯ ದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

ಸೆ.9ರಂದು ನಡೆದ ಸಭೆಯಲ್ಲಿ 1500 ಕೋಟಿರೂ ಪ್ರಧಾನ ಮಂತ್ರಿ ಆವಾಜ್ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿಪರ್ಯಾವೆಂದರೆ ಕೇಂದ್ರ ಸರ್ಕಾರಕ್ಕೆ 2000 ಕೋಟಿ ರೂ ವೆಚ್ಚದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ವಸತಿ ಕಲ್ಪಿಸಲು 4 ಲಕ್ಷ ಮನೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.2020ರಲ್ಲಿ ಸಲ್ಲಿಸಿದ ಪ್ರಸ್ತಾವನೆಗೆ ಇದುವರೆಗೂ ಅನುಮೋದನೆ ದೊರಕಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 1500 ಕೋಟಿ ರೂ ವೆಚ್ಚದಲ್ಲಿ 1 ಲಕ್ಷ ಮನೆ ನಿರ್ಮಾಣ ಯೋಜನೆಯನ್ನು ವಿವಿಧ ವಸತಿ ನಿಗಮಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಅದರಂತೆ ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಎದು ರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಒಂದೆಡೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರೆ ಮತ್ತೊಂದೆಡೆಮ ವಿವಿಧ ವಸತಿ ನಿಗಮಗಳಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಲು ಆದೇಶ ನೀಡಿರುವುದು ವಿಪರ್ಯಾಸವಾಗಿ ಕಂಡು ಬರುತ್ತಿದೆ.