ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಚಿಕ್ಕ ಪಡಸಲಗಿ ಸೇತುವೆ ರಕ್ಷಣಾ ಗೋಡೆಗೆ ಕಾರು ಡಿಕ್ಕಿ ಹೊಡೆದು, ಸೇತುವೆಯ ಗ್ರಿಲ್ ಮೇಲೆ ನಿಂತಿದ್ದರಿಂದ ಸ್ವಲ್ಪದರಲ್ಲಿಯೇ ಭಾರೀ ಅನಾಹುತ ತಪ್ಪಿದೆ.

ಜಮಖಂಡಿ ಕಡೆಯಿಂದ ವಿಜಯಪುರ ಕಡೆಗೆ ಕಾರಿನಲ್ಲಿದ್ದವರು ಪ್ರಯಾಣಿಸುತ್ತಿದ್ದರು. ಕಾರು ಸೇತುವೆಯ ಬಳಿ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದು ಅಲ್ಲಿಯೇ ನೇತಾಡುತ್ತಿದ್ದಿತ್ತು.
ಕಾರು ಅಫಘಾತವಾದ ಬಳಿಕ ಕಾರಿನಲ್ಲಿದ್ದವರು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಜಮಖಂಡಿ ಗ್ರಾಮೀಣ ಠಾಣಾ ಪೊಲೀಸರು ಕಾರಿನ ವಾರಸುದಾರರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.