ಬೆಂಗಳೂರು : ವಿಧಾನ ಪರಿಷತ್ತಿನ ಆಡಳಿತ ಪಕ್ಷದ ನಾಯಕನಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನ ಹಿನ್ನಲೆಯಲ್ಲಿ ಈ ಆದೇಶ ಹೊರಬಿದ್ದಿದೆ ಎನ್ನಲಾಗಿ ದೆ.ಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ಕೋಟಾ ಅವರನ್ನು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ್ದರು. ಮತ್ತೆ ಬೊಮ್ಮಾಯಿ ಸರ್ಕಾರದಲ್ಲಿಯೂ ಅವರನ್ನೇ ಸಭಾ ನಾಯಕರಾಗಿ ಮುಂದುವರೆಸಲು ತೀರ್ಮಾನ ಕೈಗೊಂಡಿದ್ದಾರೆ.

ಪರಿಷತ್ತಿನಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಜೊತೆಯಲ್ಲಿ ಎಂಟಿಬಿ ನಾಗರಾಜ್ ಮಾತ್ರ ಸಚಿವರಾಗಿ ಉಳಿಸಿದಿದ್ದಾರೆ.ಹಿಂದಿನ ಸಂಪುಟದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ,ಆರ್.ಶಂಕರ್,ಕೋಟಾ ಶ್ರೀನಿವಾಸ ಪೂಜಾರಿ,ಎಂಟಿಬಿ ನಾಗರಾಜ್,ಸಿ.ಪಿ.ಯೋಗೇಶ್ವರ್ ಸಚಿವರಾಗಿದ್ದರು.
ಬೊಮ್ಮಾಯಿ ಸಂಪುಟದಲ್ಲಿ ಆರ್.ಶಂಕರ್,ಸಿ.ಪಿ,ಯೋಗೇಶ್ವರ್,ಲಕ್ಷ್ಮಣ್ ಸವದಿ ಅವರನ್ನು ಕೈ ಬಿಡಲಾಗಿದ್ದು ಇಬ್ಬರೇ ಮಾತ್ರ ಸಚಿವರು ಉಳಿಸಿಕೊಂಡಿದ್ದಾರೆ.