ಬೆಂಗಳೂರು : ಪೆಟ್ರೋಲ್ ,ಡೀಸೆಲ್ ಹಾಗೂ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ವಿಧಾನ ಸೌಧ ಚಲೋಗೆ ಮುಂದಾ ಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ತೆರಳುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗೆ ಖಂಡನೆ ವ್ಯಕ್ತಪಡಿಸಲಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ,ಪೆಟ್ರೋಲ್,ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳದಿಂದಾಗಿ ಜನ ಸಾಮಾನ್ಯರ ಜೀವನವನ್ನು ದುಸ್ಥಿತಿಯತ್ತ ದೂಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನೀತಿ ಖಂಡಿಸಿ ಕಾಂಗ್ರೆಸ್ ನಾಯಕರು ಸರ್ಕಾರದ ಗಮನ ಸೆಳೆಯಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ 9 ಗಂಟೆಗೆ ಸದಾಶಿವನಗರ ನಿವಾಸದಿಂದ,ಅದೇ ರೀತಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುಮಾರ ಪಾರ್ಕ್ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ. ಕೆಲ ದಿನಗಳ ಹಿಂದೆ ಸೈಕಲ್ ಏರಿ ಕೇಂದ್ರದ ದರ ಹೆಚ್ಚಳವನ್ನು ಕಾಂಗ್ರೆಸ್ ನಾಯಕರು ಖಂಡಿಸಿದರು.