ಬೆಳಗಾವಿ ಪಾಲಿಕೆ ಸದಸ್ಯರಿಂದ ಮುಖ್ಯಮಂತ್ರಿ ಭೇಟಿ, ಮಾತುಕತೆ

ಬೆಂಗಳೂರು : ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ 35  ಬಿಜೆಪಿ ಪಾಲಿಕೆ ಸದಸ್ಯರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮುಖ್ಯಮಂತ್ರಿ ಅವರು ಅಭಿನಂದನೆ ಸಲ್ಲಿಸಿದರು. ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ.

ಈ ಸಂದರ್ಭದಲ್ಲಿ ಎಲ್ಲಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಪ್ರತಿಯೊಬ್ಬರೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ಶ್ರಮವಹಿಸಿ ಕೆಲಸ ಮಾಡಬೇಕು. ರಾಜ್ಯಹಾಗೂ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಶ್ರಮಿಸಬೇಕು ಎಂದು ಕರೆನೀಡಿದರು.

ಬೆಳಗಾವಿ ಪೇಟ ವಿಶೇಷ

ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಬಂದಿದ್ದ ಪ್ರತಿಯೊಬ್ಬ ಸದಸ್ಯರು ಕೂಡ ಬೆಳಗಾವಿ ಪೇಟ ಧರಿಸಿ ಬಂದಿದ್ದು ವಿಶೇಷವಾಗಿತ್ತು. ಹಾಗೆಯೇ ಎಲ್ಲರೂ ಮುಖ್ಯಮಂತ್ರಿ ಅವರ ಆಶಯದಂತೆ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ, ಬಿ ಸಿ ಪಾಟೀಲ, ಬೈರತಿ ಬಸವರಾಜ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ ಮತ್ತು ಇತರರು ಉಪಸ್ಥಿತರಿದ್ದರು.

More News

You cannot copy content of this page