ಸಿಎಂ ಆಗಿ ಉತ್ತಮ ಕೆಲಸ : ಬೊಮ್ಮಾಯಿ ಬೆನ್ನುತಟ್ಟಿದ ಬಿ ಎಸ್ ವೈ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ವಿಧಾನಸೌಧಕ್ಕೆ ಆಗಮಿಸಿದರು. ಈಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಶಾಸಕನಾಗಿ ಪಕ್ಷದಲ್ಲಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಪರವಾಗಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಅವರಿಗೆ ಎಲ್ಲ ರೀತಿಯ ಸಹಕಾರ ಕೊಡಲು ಸಿದ್ದನಿದ್ದೇನೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮುಂಬರುವ ದಿನಗಳಲ್ಲಿ ರಾಜ್ಯದ್ಯಾಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡ್ತೇವೆ ಎಂದು ತಿಳಿಸಿದ ಯಡಿಯೂರಪ್ಪ, ನಾವು ನಮ್ಮ ಪಕ್ಷದ  ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ, ಪಕ್ಷವನ್ನು ಕಟ್ಟುತ್ತೇವೆ ಎಂದು ತಿಳಿಸಿದರು.

ಮುಂದಿನ ದಿನ ಸಿದ್ದರಾಮಯ್ಯ ಅವರು ಆಕಸ್ಮಾತ್ ಆಗಿ ಗೆದ್ರು ಕೂಡ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸ್ತೇನೆ ಎಂದು ಕಾಂಗ್ರೆಸ್ ನವರು ಬೆಲೆ ಏರಿಕೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ವ್ಯಂಗ್ಯವಾಡಿದರು.

ಹಾಲಿ ಮಾಜಗಳ ಸಮಾಗಮ

ವಿಧಾನಸೌಧದ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಕುಳಿತುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿಗೆ ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ಕುಶಲೋಪಚಾರ ವಿಚಾರಿಸಿದರು. ಸುಮಾರು ಹತ್ತು  ನಿಮಿಷಗಳ ಕಾಲ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಸುಧಾಕರ್ ಉಪಸ್ಥಿತರಿದ್ದರು.

More News

You cannot copy content of this page