‘ಪೆಟ್ರೊಮ್ಯಾಕ್ಸ್’ ಚಿತ್ರದ ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್

ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ಹಾಗೂ ಹರಿಪ್ರಿಯಾ ಅಭಿನಯದ ‘ಪೆಟ್ರೊಮ್ಯಾಕ್ಸ್’ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿದೆ. ಚಿತ್ರದ ಟ್ರೈಲರ್ ಇದೇ ತಿಂಗಳು 20ರಂದು ಬಿಡುಗಡೆಯಾಗಲಿದೆ.

ಈ ಕುರಿತು ನಟ ಸತೀಶ್ ನೀನಾಸಂ ತಮ್ಮ ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ. ಸಾಕಷ್ಟು ಅಭಿಮಾನಿಗಳು ನಿರೀಕ್ಷಿಸುತ್ತಿರುವ ಪೆಟ್ರೋಮ್ಯಾಕ್ಸ್ ಟ್ರೈಲರ್ ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನ ಅಪ್ ಲೋಡ್ ಮಾಡಿದ್ದಾರೆ.

ಕಾರುಣ್ಯ ರಾಮ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸೆಪ್ಟೆಂಬರ್ 20ರ  ಬೆಳಿಗ್ಗೆ 11 ಗಂಟೆಗೆ ಈ ಟ್ರೈಲರ್ ರಿಲೀಸ್ ಆಗಲಿದೆ. ಸ್ಟುಡಿಯೋ 10, ಸತೀಶ್ ನೀನಾಸಂ ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಬ್ಯಾನರ್ ನಿಂದ ಈ ಸಿನಿಮಾ ನಿರ್ಮಿಸಿದ್ದಾರೆ.

More News

You cannot copy content of this page