ರಾಷ್ಟೀಯ ಪೊಲೀಸ್ ಆಯೋಗದ ಮಾರ್ಗಸೂಚಿಗಳಂತೆ ಹೊಸ ಠಾಣೆಗಳ ಸ್ಥಾಪನೆ: ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ,  ರಾಷ್ಟೀಯ ಪೊಲೀಸ್ ಆಯೋಗದ ಮಾರ್ಗಸೂಚಿಗಳಂತೆ ಹೊಸ ಠಾಣೆ ಗಳನ್ನು ಸ್ಥಾಪಿಸುವ ಅಥವಾ ಮೇಲ್ದರ್ಜೆಗೇರಿಸುವ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು  ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು ಸಚಿವರು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಹೂಲಗೇರಿ ಡಿ ಎಸ್  ಅವರ ಪ್ರಶ್ನೆಗೆ ಉತ್ತರಿಸುತ್ತಾ,  ಲಿಂಗಸೂಗೂರು ಪಟ್ಟಣದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸ್ಥಾಪನೆಗೆ ಬೇಕಾಗಬಹುದಾದ ನಿವೇಶನವನ್ನು ಜಿಲ್ಲಾಡಳಿತದಿಂದ ಒದಗಿಸಿಕೊಡಲಾಗುವುದು ಎಂದುತಿಳಿಸಿದರು.

“ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದರಂತೆ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ್ದು,  ಬೆಂಗಳೂರು ನಗರದಲ್ಲಿ ಪ್ರತ್ಯೇಕವಾಗಿ ಎರಡು, ಮಂಗಳೂರು, ಬೆಳಗಾವಿ, ಮೈಸೂರು ಹಾಗೂ ಕಲಬುರಗಿ ನಗರದಲ್ಲಿಯೂ ತಲಾ ಒಂದು  ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ” ಎಂದು ಸದನಕ್ಕೆ ತಿಳಿಸಿದರು.

ಸಚಿವರು, ವಿಧಾನ ಸಭೆಯಲ್ಲಿ, ದಂಡ ಪ್ರಕ್ರಿಯೆ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ೨೦೨೧ ಹಾಗೂ ಕರ್ನಾಟಕ ಬಂದೀಖಾನೆ ಅಭಿವೃದ್ಧಿ  ಮಂಡಳಿ ವಿಧೇಯಕ ೨೦೨೧, ಹಾಗೂ, ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ೨೦೨೧ ವಿಧೇಯಕವನ್ನೂ, ಸಭೆಯ ಮುಂದೆ ಮಂಡಿಸಿದರು.

More News

You cannot copy content of this page