ಮಾಜಿ ಕೇಂದ್ರ ಸಚಿವರ ಅಂತಿಮ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ನಿನ್ನೆ ನಿಧನರಾಗಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಅಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಇಂದು ಉಡುಪಿಯಲ್ಲಿನ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಅಸ್ಕರ್ ಅವರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು. ಹಾಗೂ ಅವರ ಪಾರ್ಥೀವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ ಉಪಸ್ಥಿತರಿದ್ದರು.

ಅಸ್ಕರ್ ಫರ್ನಾಂಡೀಸ್ ಅವರ ನಿವಾಸದಲ್ಲಿ ಅವರ ನೂರೂರು ಬೆಂಬಲಿಗರು, ಹಿತೈಷಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು. ಇಂದು ಸಂಜೆ ಅಂತ್ಯಕ್ರಿಯೆ ನೇರವೇರಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮನೆಯಲ್ಯೋಲಿಯೇ ಬಿದ್ಗಿದ್ದರಿಂದ ಅವರ ತಲೆಗೆ ಪೆಟ್ಟು ಬಿದ್ದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ವಿಧಿವಶರಾಗಿದ್ದರು. 80 ವರ್ಷದ ಅಸ್ಕರ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು, ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.

More News

You cannot copy content of this page