ಹಿಂದೂ ದೇವಾಲಯಗಳನ್ನು ಬಿಜೆಪಿಯವರೇ ನಾಶ ಮಾಡೋದು: ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ಹಿಂದೂ ದೇವಾಲಯಗಳನ್ನು ಬಿಜೆಪಿಯವರೇ ನಾಶ ಮಾಡೋದು. ಮಾತಾಡಿದ್ರೆ ರಾಮನ ಜಪ, ರಾಮ ಮಂದಿರ ಕಟ್ಟುತ್ತೇವೆ ಅಂತ ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಭಕ್ತರ ಗಮನಕ್ಕೆ ತಂದು ಪರ್ಯಾಯ ವ್ಯವಸ್ಥೆ ಮಾಡಿ ಆಮೇಲೆ ದೇವಸ್ಥಾನ ಕೆಡವಬಹುದಿತ್ತು. ಏಕಾಏಕಿ ದೇವಸ್ಥಾನ ದ್ವಂಸ ಮಾಡಿರುವುದು ಬಿಜೆಪಿಯವರ ಢೋಂಗಿತನ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವವಾದ ಎನ್ನೋದು ಕೇವಲ ರಾಜಕಾರಣಕ್ಕಾಗಿ, ಓಟಿಗಾಗಿ ಮಾತ್ರ ಬಳಸುತ್ತಿದ್ದಾರೆ.  ಅಸಲಿಗೆ ಬಿಜೆಪಿಯವರಿಗೆ ಹಿಂದೂ ಧರ್ಮದ ಬಗ್ಗೆ ಸ್ವಲ್ಪನೂ ಗೌರವವಿಲ್ಲ ಎಂಬುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ ಎಂದು ಟಿಕೀಸಿದರು.

ಸರ್ಕಾರದ ಗಮನಕ್ಕೆ ತರದೇ ಮುಖ್ಯಕಾರ್ಯದರ್ಶಿಗಳು ದೇವಸ್ಥಾನ ತೆರವುಗೊಳಿಸುವ ಕುರಿತು ಪತ್ರ ಬರೆಯಲು ಸಾಧ್ಯವಿಲ್ಲ. 15ನೇ ತಾರೀಖಿನಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರು ಸುಪ್ರೀಂ ಕೋರ್ಟ್ ನ ತೀರ್ಮಾನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಮೇಲೆ ತಮ್ಮ ಮಾನ ಉಳಿಸಿಕೊಳ್ಳಲು ಸರ್ಕಾರ ಬಣ್ಣ ಬದಲಾಯಿಸಿದೆ. ಈಗ ಅವರಿಗೆ ಒಡೆಯಬೇಡಿ ಎಂಬ ಸೂಚನೆ ಕೊಡ್ತೀವಿ ಎನ್ನುತ್ತಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ದೇವಾಲಯ ಒಡೆದಿದ್ದಾರಾ?  ಎಂದು ಪ್ರಶ್ನಿಸಿದ ಅವರು, ಮೈಸೂರು ಸಂಸದರು ಈಗ ದೇವಾಲಯ ಒಡೆದ ಮೇಲೆ ಮಾತಾಡ್ತಾರೆ. ಇದರ ಬದಲು ಸರ್ಕಾರದ ಗಮನಕ್ಕೆ ತಂದು ದೇವಸ್ಥಾನ ಒಡೆಯುವುದನ್ನು ತಡೆಯಬೇಕಿತ್ತು ಎಂದು ಟಿಕೀಸಿದರು.

ಸುಪ್ರೀಂ ಕೋರ್ಟ್ ನಿರ್ಣಯ ಬಂದಿದ್ದು ಇವತ್ತು ನಿನ್ನೆಯದಲ್ಲ. ಸರ್ಕಾರ ಇಷ್ಟು ದಿನ ಏನು ಮಾಡ್ತಾ ಇತ್ತು? ಬಿಜೆಪಿ ಸರ್ಕಾರ ಬಂದು ಎರಡೂವರೆ ವರ್ಷ ಆಯ್ತು, ಈಗ ಯಾಕೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ನಾಟಕ? ಇದು ಢೋಂಗಿತನವಲ್ಲದೆ ಇನ್ನೇನು? ನಾವು ಬಿಜೆಪಿಯವರಂತೆ ರಾಜಕೀಯಕ್ಕಾಗಿ ಧರ್ಮ, ದೇವರನ್ನು ಬಳಸಿಕೊಳ್ಳಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.  

More News

You cannot copy content of this page