ಬೆಂಗಳೂರು : ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ)ವಿಧೇಯಕ 2021 (35ನೇ ವಿಧೇಯ ಕಕ್ಕೆ) ವಿಧಾನ ಸಭೆ ಯಲ್ಲಿ ಕಾಂಗ್ರೆಸ್,ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ವಿಧೇಯಕಕ್ಕೆ ಧ್ವನಿ ಮತದ ಮೂಲಕ ಅಂಗೀಕಾರ ದೊರಕಿದೆ.
ವಿಧಾನ ಸಭೆಯಲ್ಲಿಂದು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) 2021ರ ವಿಧೇಯಕ ಪರ್ಯಾಲೋ ಚನೆ ಚೆರ್ಚೆ ಮೇಲೆ ಪಾಲ್ಗೊಂಡು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾ ಮಯ್ಯ,ರಾಜ್ಯ ಸರ್ಕಾರ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರಗಳ ಪುನರ್ ವಿಂಘಡನೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ಹೊರಟಿದೆ. ಇದು ಚುನಾವಣಾ ಆಯೋಗದ ಅಧಿಕಾರವನ್ನು ಕಿತ್ತುಕೊಳ್ಳುವ ಹುನ್ನಾರ.ಚುನಾವಣಾ ಆಯೋಗಕ್ಕೆ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಈಗಾಗಲೇ ನ್ಯಾಯಾಲಯದಲ್ಲಿ ಹಲವು ಮಂದಿ ಪ್ರಶ್ನಿಸಿದ್ದಾರೆ.ಈ ಬಗ್ಗೆ ನ್ಯಾಯಾಲಯ ತೀರ್ಪು ನೀಡುವ ಮೊದಲೇ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ತರಾತುರಿಯಲ್ಲಿ ಅನುಮೋದನೆ ಪಡೆ ಯಲು ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣಾ ಆಯೋಗವು ಕ್ಷೇತ್ರಗಳ ಮೀಸಲಾತಿ ವಿಂಗಡಣೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಅಭಿಪ್ರಾಯ ಸರ್ಕಾರಕ್ಕೆ ಇದ್ದಿದ್ದರೆ.ಈ ಹಿಂದೆಯೇ ವಿಧೇಯಕಕ್ಕೆ ತಿದ್ದುಪಡಿ ಮಾಡಬೇಕಿತ್ತು,ಎರಡು ವರ್ಷದಿಂದ ಸುಮ್ಮನಿದ್ದು ಚುನಾವಣೆ ಸಮೀಪಿಸುವ ವೇಳೆ ಅದನ್ನು ಮುಂದೂಡುವ ಉದ್ದೇಶದಿಂದ ಇಂಥದ್ದೊಂದು ತಿದ್ದುಪಡಿ ತರಲಾಗುತ್ತಿದೆ ಎಂದು ಅವರು ಆಕ್ರೋಷ ವ್ಯಕ್ತಪಡಿಸಿದರು.
1994ರಲ್ಲಿ ಜತನಾ ದಳದ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿತ್ತು,ಎಂ.ಪಿ ಪ್ರಕಾಶ್ ಅವರು ಆ ಸಂಪುಟ ಉಪಸ ಮಿತಿಯ ಅಧ್ಯಕ್ಷರು ಮತ್ತು ನಾನು ಸಮಿತಿಯ ಸದಸ್ಯರಲ್ಲಿ ಒಬ್ಬನಾಗಿದ್ದೆ, ನಾಣಯ್ಯ,ಬೈರೇಗೌಡ,ಸಿಂಧ್ಯಾ ಇತರೆ ಸದಸ್ಯರಾಗಿದ್ದರು. ಮಹಿಳೆಯರಿಗೆ 33% ಮೀಸಲಾತಿ,ಹಿಂದುಳಿದ ಜಾತಿಗಳಿಗೆ 26.4% ಮೀಸಲಾತಿ,ಹಿಂದುಳಿದ ಜಾತಿಗೆ ಸೇರದವರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ 6.6% ಮೀಸಲಾತಿ ನೀಡಬೇಕು ಎಂದು ನಮ್ಮ ಸಮಿತಿ ನೀಡಿದ್ದ ವರದಿಯನ್ನು ಆಧರಿಸಿ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಯಲ್ಲೂ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ,ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸ ಲಾತಿ ನೀಡಬೇಕು ಎಂದು ನಮ್ಮಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತು.ಈ ಶಿಫಾರಸ್ಸನ್ನು ಸರ್ಕಾರ ಪರಿಗಣಿಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೂ ಮೀಸಲಾತಿ ನೀಡಿತು.ಅಲ್ಲಿಯ ವರೆಗೆ ಈ ಹುದ್ದೆಗಳಿಗೆ ಮೀಸಲಾತಿ ಸೌಲಭ್ಯ ಇರಲಿಲ್ಲ.

ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ವೇಳೆ ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿಯನ್ನು ತಂದು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು.ಈ ಮೀಸಲಾತಿ ಯನ್ನು ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯಿಷ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ, ಸ್ವತಃ ಅವರೇ ವಾದ ಮಾಡಿದರು.ಕೂಡ ನ್ಯಾಯಾಲಯ ಅದನ್ನು ತಿರಸ್ಕರಿಸಿ,ಮೀಸಲಾತಿ ಸೌಲಭ್ಯ ವನ್ನು ಎತ್ತಿಹಿಡಿಯಿತು.ತದನಂತರ ಕಾಂಗ್ರೆಸ್ ಪಕ್ಷ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆ ಯರಿಗೆ 50% ಮೀಸಲಾತಿ ನೀಡಬೇಕು ಎಂದು ಉದ್ದೇಶಿಸಿ,ಸಂವಿಧಾನ ತಿದ್ದುಪಡಿ ಮಾಡಿ,ಕಾನೂನು ಜಾರಿ ಮಾಡಿತು. ಇದರಿಂದ ಮಹಿಳೆಯರಿಗೆ ಗ್ರಾಮ ಪಂಚಾಯತಿ,ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 50% ಮೀಸಲಾತಿ ದೊರೆತಿದೆ ಎಂದು ಅವರು ಹಿಂದಿನ ಘಟನಾವಳಿಗಳನ್ನು ಸ್ಮರಿಸಿದರು.
ಬಿಜೆಪಿ ಪಕ್ಷ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿತ್ತು,ಈಗಲೂ ಮೀಸಲಾತಿ ವಿರೋಧಿಯಾಗಿದೆ. ಹಾಗಾಗಿ ಕ್ಷೇತ್ರಗಳ ಪುನರ್ ವಿಂಘಡನೆಗೆ ಆಯೋಗ ರಚನೆ ಮಾಡಿ,ಮೀಸಲಾತಿಯನ್ನು ದುರ್ಬಳಕೆ ಮಾಡಿ ಕೊಳ್ಳುವ ಹುನ್ನಾರ ಮಾಡಿದೆ.ಇದು ಸಂವಿಧಾನದ ಮೇಲಿನ ದಾಳಿ ಎಂಬುದು ನನ್ನ ಅಭಿಪ್ರಾಯ ಕೂಡ. ಇಂಥಾ ಕರಾಳ ಶಾಸನವನ್ನು ನಾನು ವಿರೋಧಿಸುತ್ತೇನೆ ಮತ್ತು ಸರ್ಕಾರ ಕಾನೂನು ಜಾರಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಸರ್ಕಾರದ ನಿರ್ಧಾರವಕ್ಕೆ ವಿರೋಧ ವ್ಯಕ್ತಪಡಿಸಿದರು.