ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದು ಕೊರತೆಗಳನ್ನು ಆಲಿಸಿದರು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದವರ ಅಹವಾಲನ್ನು ಮುಖ್ಯಮಂತ್ರಿ ಅವರು ಸ್ವೀಕರಿಸಿದರು, ಕೆಲವು ಸಮಸ್ಯೆಗಳಿಗೆ ಅಲ್ಲಿಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಬಗೆಹರಿಸುವಂತೆ ಸೂಚನೆ ನೀಡಿದರು.
ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದ ನಂತರ ಮುಖ್ಯಮಂತ್ರಿ ಅವರು ಕರ್ನಾಟಕ ಬಾರ್ ಕೌನ್ಸಿಲ್ ಆಯೋಜಿಸಿದ್ದ ಟೀ ಪಾರ್ಟಿಗೆ ತೆರಳಿದರು.