ಬೆಂಗಳೂರು : ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ದೂರದೃಷ್ಟಿಯನ್ನು ಇಟ್ಟುಕೊಂಡು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯನ್ನು ಸ್ಥಾಪಿಸಿದರು. ಅದು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಾಗಿ ಬೆಳೆದಿದ್ದು, ಹೆಮ್ಮೆ ತಂದಿದೆ ಎಂದು ಮಹಾರಾಜ ಯುದುವೀರ್ ಕೃಷ್ಣದತ್ತಚಾಮರಾಜ ಒಡೆಯರು ಅಭಿಪ್ರಾಯಪಟ್ಟಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಮಾಡಿದ ಕೊಡುಗೆಗಳನ್ನು ನೆನೆಪಿಸಿ ಅವರ ಪುತ್ಥಳಿಯನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯವರು ತಮ್ಮ ಆವರಣದಲ್ಲಿ ಆನಾವರಣ ಮಾಡಿರುವುದರಿಂದ ಮೈಸೂರು ಅರಮನೆಯವರ ಪರವಾಗಿ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತಾ ಅವರು ಮಾತನಾಡುತ್ತಾ, ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನೀತಿ ನಿಯಮಗಳು ರಚಿಸುವಲ್ಲಿ ಸರ್ಕಾರಕ್ಕೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಲ್ಲಿ ತನ್ನ ಅಪಾರ ಕೊಡುಗೆಯನ್ನು ನೀಡುವ ಮಟ್ಟಿಗೆ ಬೆಳೆದು ನಿಂತಿರುವ ನಮ್ಮ ಸೌಭಾಗ್ಯ ಎಂದು ತಿಳಿಸಿದರು.
ಎಫ್‌ಕೆಸಿಸಿಐನ ಚಟುವಟಿಕೆಗಳಿಗೆ ನನ್ನ ಸಹಕಾರ ಸದಾ ಇರುತ್ತದೆ ಎಂದು ಭರವಸೆ ನೀಡಿದರು. ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಪೆರಿಕಲ್ ಎಂ ಸುಂದರ್ ರವರು ಸ್ವಾಗತ ಭಾಷಣದಲ್ಲಿ ಮಾತನಾಡುತ್ತಾ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯನ್ನು ಬೆಂಗಳೂರಿನಲ್ಲಿ ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಆಡಳಿತದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯರವರ ಅಮೃತ ಹಸ್ತದಿಂದ 1916 ರಲ್ಲಿ ಸ್ಥಾಪಿತಲಾಯಿತು. ಈ ಸಂಸ್ಥೆಯ ಆವರಣದಲ್ಲಿ ಅವರ ಪುತ್ಥಳಿ ಸ್ಥಾಪಿಸಿ ಅವರನ್ನು ಸ್ಮರಿಸುವುದು ನಾವು ಅವರಿಗೆ ಸಲ್ಲಿಸುವ ಗೌರವ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಿಎ ಡಾ. ಐ.ಎಸ್ ಪ್ರಸಾದ್, ಚುನಾಯಿತ ಅಧ್ಯಕ್ಷರು, ಗೋಪಾಲ್ ರೆಡ್ಡಿ, ಚುನಾಯಿತ ಹಿರಿಯ ಉಪಾಧ್ಯಕ್ಷರು, ಟಿ. ವಾಸನ್, ಕಾರ್ಯಕ್ರಮದ ಸಂಯೋಜಕರು ಮುಂತಾದವರು ಉಪಸ್ಥಿತಿರಿದ್ದರು.