ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಂಗಳೂರು: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಈ ಬಾರಿ ಸದನ ಆರಂಭವಾಗುವುದಕ್ಕಿಂತ ಮುಂಚೆ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದರು. ಅತ್ಯುತ್ತಮ ಶಾಸಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರಶಸ್ತಿಯನ್ನು ನೀಡಲಾಯಿತು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More News

You cannot copy content of this page