ಬೆಂಗಳೂರು : ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು,ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ 0.66 % ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು.ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಭರ್ತಿಗೆ ಹಾಗೂ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು.ಇದೇ ಮಾನದಂಡವನ್ನು ಅನುಸರಿಸಿ ಅಕ್ಟೋ ಬರ್ 3 ರಿಂದ ಪಬ್ ಗಳನ್ನು ತೆರೆಯಲಾಗುವುದು ಎಂದು ಅವರು ಹೇಳಿದರು.

ಚಿತ್ರಮಂದಿರಗಳಲ್ಲಿ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ.ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ.ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ನಿಗದಿ ಪಡಿಸಲಾಗುವುದು.ಆರರಿಂ ದ ಹನ್ನೆರಡನೇ ತರಗತಿವರೆಗೆ ಶೇ.100 ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು.ವಾರದಲ್ಲಿ ಐದು ದಿನ ಶಾಲಾ ಕಾಲೇಜುಗ ಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ದಸರಾ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು.ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲಾಗುವುದು ಎಂದು ತಿಳಿಸಿದರು. ಯಾದಗಿರಿ,ರಾಯಚೂರು,ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು,ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್,ಆರೋಗ್ಯ ಸಚಿವ ಡಾ. ಕೆ.ಸುಧಾಕರ್,ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್,ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.