ಕರ್ನಾಟಕ ಉಚ್ಛ ನ್ಯಾಯಾಲಯದ 10 ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಉಚ್ಛನ್ಯಾಯಲಯದ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿರುವ 10 ನ್ಯಾಯಾಧೀಶರು ಇಂದು ಪ್ರಮಾಣ ವಚನ ಸ್ವೀಕರಿಸಿದರು.ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.  

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೂತನ ನ್ಯಾಯಾಧೀಶರಿಗೆ ರಾಜ್ಯಪಾಲರು ಪ್ರಮಾಣ ವಚನ ಮತ್ತು ಗೌಪ್ಯತೆಯನ್ನು ಬೋಧಿಸಿದರು.ಕರ್ನಾಟಕ ಉಚ್ಛನ್ಯಾಯಾ ಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣವರ್,ಶ್ರೀಮತಿ ಮಕ್ಕಿಮನೆ ಗಣೇಶಯ್ಯ ಉಮಾ,ವೇದವ್ಯಾಸಾಚಾರ್ ಶ್ರೀಶಾನಂದ,ಹಂಚಟೆ ಸಂಜೀವಕುಮಾರ್,ಪದ್ಮರಾಜ್ ನೇಮಚಂದ್ರ ದೇಸಾಯಿ,ಪಂಜಿಗಡ್ಡೆ ಕೃಷ್ಣ ಭಟ್,ಮರಳೂರು ಇಂದ್ರಕುಮಾರ್ ಅರುಣ್,ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್,ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ,ಉಚ್ಚನ್ಯಾಯಾಲಯದ  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು.

More News

You cannot copy content of this page