ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್ ಅಭಿನಯದ ಬಹು ನಿರೀಕ್ಷಿತ ಭಜರಂಗಿ-2 ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದೆ. ಬರುವ ಅಕ್ಟೋಬರ್ ತಿಂಗಳಲ್ಲಿ ಭರ್ಜರಿಯಾಗಿ ಭಜರಂಗಿ ಚಿತ್ರಮಂದಿರಗಳಲ್ಲಿ ಎಂಟ್ರಿ ಕೊಡಲಿದ್ದಾನೆ.
ಹಾಗೆ ನೋಡಿದ್ರೆ ಸೆಪ್ಟೆಂಬರ್ ನಲ್ಲಿಯೇ ಈ ಸಿನಿಮಾ ತೆರೆಗೆ ತರಲು ಚಿತ್ರತಂಡ ಸಿದ್ಧತೆ ನಡೆಸಿತ್ತು. ಆದ್ರೆ ಕೊರೊನಾ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಶೇಕಡಾ 50 ರಷ್ಚು ಮಾತ್ರ ಪ್ರೇಕ್ಷಕರ ಹಾಜರಾತಿಗೆ ಸರ್ಕಾರ ನಿರ್ಬಂಧ ವಿಧಿಸಿದ್ದರಿಂದ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆಬರಲಿದೆ.
ಇದೀಗ ಹೊಸ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್29 ರಂದು ರಾಜ್ಯಾದ್ಯಂತ ಬೆಳ್ಳಿ ಪರದೆ ಮೇಲೆ ಭರ್ಜರಿ ಸಿನೆಮಾ ರಾರಾಜಿಸಲಿದೆ.
ಎ. ಹರ್ಷ ನಿರ್ದೇಶನದ ಈ ಚಿತ್ರಕ್ಕೆ ಜಯಣ್ಣ ಮತ್ತು ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ‘ಭಜರಂಗಿ’ ಸೂಪರ್ ಹಿಟ್ ಆಗಿದ್ದರಿಂದ ‘ಭಜರಂಗಿ 2’ ಮೇಲೆ ಪ್ರೇಕ್ಷಕರಲ್ಲಿ ಹೆಚ್ಚು ನಿರೀಕ್ಷೆ ಹುಟ್ಟಿಸಿದೆ.
ಇನ್ನು ರಾಜ್ಯಾದ್ಯಂತ ಸಿನಿಮಾ ಮಂದಿರಗಳಲ್ಲಿ ಪೂರ್ಣ ಪ್ರಮಾಣದ ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಇದರಿಂದ ಕನ್ನಡದ ಸ್ಟಾರ್ ನಟರುಗಳ ಸಿನಿಮಾಗಳ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದ್ದು, ರಿಲೀಸ್ ಡೇಟ್ ಅನೌನ್ಸ್ ಆಗುತ್ತಿವೆ.