ಬೆಂಗಳೂರು : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕರೆ ಕೊಟ್ಟಿದ್ದ ಭಾರತ್ ಬಂದ್ ನೀರಸ ಪ್ರತಿಕ್ರಿಯೆವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಲವಾರು ಸಂಘಟನೆಗಳ ಕಾರ್ಯಕರ್ತರು ಟೌನ್ ಹಾಲ್ ನಲ್ಲಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಗೆಯೇ ಟೌನ್ ಹಾಲ್ ನಿಂದ ಹೊರಟ ಮೆರವಣಿಗೆ ಮೈಸೂರು ಬ್ಯಾಂಕ್ ವೃತ್ತದ ಜಮಾವಣೆಗೊಂಡಿತ್ತು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ರೈತರ ವಿರೋಧಿ ಕಾಯಿದೆಗಳನ್ನು ವಾಪಾಸ್ಸು ಪಡೆಯಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರಿಂದ ಸಂಚಾರ ಅಸ್ತವ್ಯಸ್ಥವಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಕೇಂದ್ರ ಸರ್ಕಾರ ಕಾಯಿದೆಗಳ್ನು ವಾಪಾಸ್ಸು ಪಡೆಯದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.