ಬೆಂಗಳೂರು : ಶಾಸಕರ ನಿಧನದಿಂದ ತೆರವಾಗಿದ್ದ ಕರ್ನಾಟಕದ ಎರಡು ವಿಧಾನ ಸಭಾ ಕ್ಷೇತ್ರ ಸೇರಿದಂತೆ 30 ವಿಧಾನ ಸಭಾ ಕ್ಷೇತ್ರ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಮೂರು ಲೋಕಸಭಾ ಕ್ಷೇತ್ರಗಳು ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಕ್ಷೇತ್ರಗಳು ಸೇರಿದಂತೆ 30 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಿದೆ.ದಾದರ್ ಮತ್ತು ಹಾವೇಲಿ ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶದ ತಲಾ ಒಂದೊಂದು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಅಂತೆಯೇ ಕರ್ನಾಟಕದ ಸಿಂಧಗಿ,ಹಾನಗಲ್ ವಿಧಾನ ಸಭಾ ಕ್ಷೇತ್ರಗಳು ಸೇರಿದಂತೆ ಅಸ್ಸಾಂ ರಾಜ್ಯದ-5 ಪಶ್ಚಿಮ ಬಂಗಾಳ-4,ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶ,ಮೇಘಾಲಯದ ರಾಜ್ಯಗಳಲ್ಲಿ ತಲಾ -3 ಸ್ಥಾನಗಳಿಗೆ,ಬಿಹಾರ,ರಾಜಸ್ಥಾನ,ಕರ್ನಾಟಕದ ತಲಾ 2 ಕ್ಷೇತ್ರಗಳಿಗೆ,ಹರಿಯಾಣ,ನಾಗಾಲ್ಯಾಂಡ್,ಮಣಿ ಪುರ,ತೆಲಂಗಾಣ,ಮಹರಾಷ್ಟ್ರ ರಾಜ್ಯಗಳಲ್ಲಿ ತಲಾ 1ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

ಕರ್ನಾಟಕದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.ಲೋಕಸಭೆ ಮತ್ತು ವಿಧಾನ ಸಭೆ ಉಪ ಚುನಾವಣೆಗೆ ಅಕ್ಟೋಬರ್ 1ರಂದು ಅಧಿಸೂಚನೆ ಹೊರಬೀಳಲಿದ್ದು ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 30 ಕ್ಕೆ ಮತದಾನ ನಡೆಯಲಿದ್ದು,ನವೆಂಬರ್ 2ಕ್ಕೆ ಮತ ಎಣಿಕೆ ನಡೆಯಲಿದೆ.