ಪಕ್ಷದ ನಾಯಕತ್ವದಲ್ಲೇ ಮುಂಬರುವ ಚುನಾವಣೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಮುಂಬರುವ ಚುನಾವಣೆ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿನ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ ಅವರು, ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಕೇಂದ್ರದ ಗೃಹ ಸಚಿವ ಅಮಿತ್ ಷಾ ದಾವಣಗೆರೆಗೆ ಬಂದಾಗ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂಬರುವ ಚುನಾವಣೆಗಳನ್ನು ಎದುರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ಪಕ್ಷದಲ್ಲಿ ಸಾಕಷ್ಟು ಅಪಸ್ವರಗಳು ಎದ್ದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಕ್ಷದ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ನೀಡಿರುವ ಹೇಳಿಕೆ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಮಹತ್ವದ ಪಡೆದಿದೆ.

ಚುನಾವಣಾ ಆಯೋಗ ಎರಡು ಬೈ ಎಲೆಕ್ಸನ್ ಘೋಷಣೆ ಮಾಡಿದೆ, ಸಿ ಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರ ಹಾಗೂ ಸಿಂದಗಿ ಮನಗುಳಿ ನಿಧನದಿಂದ ತೆರವಾಗಿರುವ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ, ಈ ಚುನಾವಣೆಗಳನ್ನು ಪಕ್ಷದ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿ ಗಳ ಬಗ್ಗೆ ಚರ್ಚೆ ಆಗಿದೆ, ಎರಡು ಕ್ಷೇತ್ರಗಳಿಗೂ ವೀಕ್ಷಕರನ್ನು ಕಳುಹಿಸಿಕೊಡಲಾಗುವುದು, ಅವರು ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು, ಹಾಗೆಯೇ ಅವರು ನೀಡುವ ವರದಿ ಆಧಾರದ ಮೇಲೆ ಅಭ್ಯರ್ಥಿ ಅಯ್ಕೆ ನಡೆಸಲಾಗುವುದು ಎಂದು ತಿಳಿಸಿದರು. ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಅವರು ವ್ಯಕ್ತಪಡಿಸಿದರು.

ಮತಾಂತರಕ್ಕೆ ಅವಕಾಶವಿಲ್ಲ

ಅಲ್ಲಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇಂಥದ್ದಕ್ಕೆಲ್ಲ ಅವಕಾಶ ಕೊಡದಂತೆ ಕಠಿಣ ಕ್ರಮ ಕೈಗೊಳ್ಳಲು ಡಿಸಿಗೆ ಸೂಚಿನೆ ನೀಡಲಾಗಿದೆ ಎಂದು ತಿಳಿದರು.

ಬಲವಂತದ ಮತಾಂತರ ತಡೆಯಲು ಕಾನೂನು ತರಲಾಗುವುದು, ಯಾದಗಿರಿ,  ಬೆಂಗಳೂರಿನ ಬ್ಯಾಡರಹಳ್ಳಿಗಳಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಈ ರೀತಿಯಾಗಿ ನಿರ್ದೇಶನ ನೀಡಿದ್ದಾರೆ.

More News

You cannot copy content of this page