2023ರ ಚುನಾವಣೆಯಲ್ಲಿ 30-35 ಮಹಿಳೆಯರಿಗೆ ಜೆಡಿಎಸ್ ಟಿಕೆಟ್ : ಎಚ್ ಡಿಕೆ ಘೋಷಣೆ

ಬೆಂಗಳೂರು : 2023ರ ಸಾರ್ವತ್ರಿಕ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

ಬಿಡದಿಯ ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರಕ್ಕೂ ಮುನ್ನ ಸುದ್ದಿ ಗಾರರೊಂದಿಗೆ ಮಾತ ನಾಡಿದ ಅವರು,ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇ ವೆ.ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು ಮಹಿಳೆಯರಿಗೆ ಮೀಸಲಿ ಡಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿ,ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ.ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ ಎಂದರು.

ಮಹಿಳೆಯರಿಗೂ ಟಾಸ್ಕ್ : ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಗುರಿ ನಿಗದಿ ಮಾಡಲಾ ಗಿದೆ.3ನೇ ದಿನ‌ದ ಇಂದಿ ನ  ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನೀಡುವುದು.ಅಲ್ಲದೆ 30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯ ರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.ಅವರನ್ನು ಮತ್ತಷ್ಟು ಹುರುಪಗೊಳಿಸಿ ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ,ಎಲ್ಲ ಮಹಿಳಾ ನಾಯಕಿ ಯರಿಗೆ ಸೂಕ್ತ ತರಬೇತಿ ಕೊಡಲಾಗುವುದು.ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡು ವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿ ಯರಿಗೆ ನೀಡಲಾಗುತ್ತದೆ ಎಂದು ಅವರು ನುಡಿದರು.

ಮಹಿಳೆಯರಿಗೆ 33% ಮೀಸಲು ವಿಧೇಯಕ : ಮಾಜಿ ಪ್ರಧಾನಮಂತ್ರಿ ದೇವೇಗೌಡರು  ಮಹಿಳೆಯರಿಗೆ ಚುನಾವಣೆಯಲ್ಲಿ 33% ಮೀಸಲಾತಿ ಕೊಡಬೇಕೆಂದು ಧ್ವನಿ ಎತ್ತಿದ್ದರು.ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ.ಕರ್ನಾಟಕ ದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾಡುತ್ತೇವೆ. 2023ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾ ತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಅವರು ಭರವಸೆ ನೀಡಿದರು.

ಮಹಿಳಾ ಕಾರ್ಯಾಗಾರಕ್ಕೆ ಚಾಲನೆ  : ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್ ರಾಜ್ಯಾಧ್ಯಕ್ಷೆ ಲೀಲಾದೇವಿ ಆರ್.ಪ್ರಸಾದ್ ಅವರು ಕಾರ್ಯಗಾರಕ್ಕೆ  ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿದರು.

ಪ್ರಾಸ್ತಾವಿಕವಾಗಿ ಲೀಲಾದೇವಿ ಆರ್.ಪ್ರಸಾದ್ ಅವರು ಮಾತನಾಡಿದರು.ದೇವದುರ್ಗದ ಮುಂದಿನ ಅಭ್ಯರ್ಥಿ ಕರಿಯಮ್ಮ,ಮಹಿಳಾ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷೆ ರುತ್ ಮನೋರಮಾ ವೇದಿಕೆಯ ಮೇಲಿದ್ದರು.ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರಂತೆ ಮಹಿಳಾ ಪ್ರತಿನಿಧಿಗಳು ಕಾರ್ಯಗಾರದಲ್ಲಿ ಭಾಗಿಯಾಗಿದ್ದರು.

More News

You cannot copy content of this page